ಕ್ರೀಡಾ ವಸತಿ ನಿಲಯಕ್ಕೆ ಡಿಸಿ ರಾಹುಲ್ ಭೇಟಿ – ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ

ಕ್ರೀಡಾ ವಸತಿ ನಿಲಯಕ್ಕೆ ಡಿಸಿ ರಾಹುಲ್ ಭೇಟಿ – ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ
Published on: 

ಯಾದಗಿರಿ: ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಸತಿ ನಿಲಯದಲ್ಲಿರುವ ಕ್ರೀಡಾಪಟು ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಮಾಲೋಚನೆ ನಡೆಸಿ, ಅವರ ಶೈಕ್ಷಣಿಕ ಪ್ರಗತಿ, ಕ್ರೀಡಾ ತರಬೇತಿ, ವಸತಿ, ಆಹಾರ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಚಟುವಟಿಕೆಗಳು ಹಾಗೂ ವಸತಿ ನಿಲಯದಲ್ಲಿ ಎದುರಿಸುತ್ತಿರುವ ವಿವಿಧ ಕುಂದು ಕೊರತೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದ ಜಿಲ್ಲಾಧಿಕಾರಿಗಳು, ಕಠಿಣ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net