ಬೆಳೆ ಪರಿಹಾರದ ಹಣ ಬ್ಯಾಂಕ್​ನವರು ಹೋಲ್ಡ್​ ಮಾಡುವಂತ್ತಿಲ್ಲ: ಎಚ್ಚರಿಕೆ

ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್​ ಸಭೆ
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್​ ಸಭೆ
Published on

ಪ್ರಮುಖ ಮುಖ್ಯಾಂಶಗಳು

  • ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್​
ಕಲಬುರಗಿ: ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್​ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತ್ತಿಲ್ಲ. ಉಲ್ಲಂಘಿಸಿದಲ್ಲಿ ಬ್ಯಾಂಕ್​ ಮ್ಯಾನೇಜರ್​ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಿಂದ ಜಿಲ್ಲೆಯ ಬ್ಯಾಂಕರ್ಸ್​ಗಳೊಂದಿಗೆ ಗೂಗಲ್​ ಮೀಟ್​ ಆನ್​ ಲೈನ್​ ಸಭೆ ನಡೆಸಿ, ಬೆಳೆ ಪರಿಹಾರ ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಬಾರದು ಎಂದು ಸ್ಪಷ್ಟ ಸೂಚನೆಯನ್ನು ನೀಡಿದರು.
ಅತಿವೃಷ್ಟಿಯಿಂದ ಬೆಳೆ ಹಾನಿಯಾದ 3,26,183 ರೈತರಿಗೆ ಎನ್​ಡಿಆರ್​ಎಫ್​ ಮಾರ್ಗಸೂಚಿಯನ್ವಯ ಪರಿಹಾರದ ಜತೆಗೆ ಪ್ರತಿ ಹೆಕ್ಟೇರ್​ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 8,500 ರೂ. ಪರಿಹಾರ ಹಣ ಸೇರಿ ಜಿಲ್ಲೆಗೆ 498.72 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರೈತರ ಬ್ಯಾಂಕ್​ ಖಾತೆಗೆ ಡಿಬಿಟಿ ಮೂಲಕ ಪಾವತಿಸಿದೆ ಎಂದರು. ಜಂಟಿ ಕೃಷಿ ನಿರ್ದೇಶಕ ಸಮದ್​ ಪಟೇಲ್​, ಜಿಲ್ಲಾ ಲೀಡ್​ ಬ್ಯಾಂಕ್​ ಮ್ಯಾನೇಜರ್​ ರವಿಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net