ಜೂನ್ 3ರ ನಂತರ ಡಿಸಿಎಂ ಹುದ್ದೆ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ

Dr Mallikarjun kharge
Dr Mallikarjun kharge
Published on
ಕಲಬುರಗಿ: ಹೆಚ್ಚುವರಿ ಡಿಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್‌ಗೆ ಇನ್ನು ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ. ಜೂನ್ 3ರ ನಂತರ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ರಾಜ್ಯ ರಾಜಕಾರಣದ ತೀವ್ರ ಕುತೂಹಲ ಕೆರಳಿಸಿರುವ ಉಪಮುಖ್ಯಮಂತ್ರಿ ಸ್ಥಾನದ ಸೃಷ್ಟಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಜತೆಗೆ ಎಷ್ಟು ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಸಹ ಇನ್ನೂ ಅಂತಿಮವಾಗಿಲ್ಲ ಎಂದರು.
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿಯೇ ಬದಲಾವಣೆಯಾಗಲಿದೆ. ಮುಖ್ಯಮಂತ್ರಿಯವರೊಂದಿಗೆ ಉತ್ತಮ ಸಮನ್ವಯತೆ (ಕೋ-ಆರ್ಡಿನೇಷನ್) ಹೊಂದಿರುವ ಹಾಗೂ ಸಾರ್ವಜನಿಕವಾಗಿ ದೊಡ್ಡ ಜನಬೆಂಬಲವಿರುವ ಸೂಕ್ತ ವ್ಯಕ್ತಿಯನ್ನೇ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net