ಕಲಬುರಗಿಯಲ್ಲಿ ಇಡಿ ದಾಳಿ: ಶಿವಶಂಕರಪ್ಪ ಸಾಹು, ವಿಜಯಲಕ್ಷ್ಮೀ ಕೋಬಾಳಕರ್ ಮನೆ ಮೇಲೆ ದಾಳಿ
ED Raid
Published on:
Copied
Follow Us
ಕಲಬುರಗಿ: ನಗರದಲ್ಲಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹು ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಏಕಕಾಲಕ್ಕೆ ನಗರದಲ್ಲಿರುವ ಶಹಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಕೋಬಾಳಕರ ಮನೆ ಮೇಲೂ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.
ಕಲಬುರಗಿ ನಗರದ ಆನಂದ ಹೋಟೆಲ್ ಬಳಿಯಿರೋ ಸಾಹು ನಿವಾಸದಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದೆ.
10 ಕ್ಕೂ ಹೆಚ್ಚು ಇಡಿ ಅಧಿಕಾರಿಗಳಿಂದ ಶಿವಶಂಕರಪ್ಪ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಆರೋಪ ಇದೆ. ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಹಾಪುರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಡಿ ಕೆಲಸ ನಿರ್ವಹಿಸುತ್ತಿರುವ ವಿಜಯಲಕ್ಷ್ಮೀ ಅವರ ಕಲಬುರಗಿ ನಗರದ ಓಜಾ ಲೇಔಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.
2009ರಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇವೆಗೆ ಸೇರಿದ ವಿಜಯಲಕ್ಷ್ಮೀ ಕೋಬಾಳಕರ್ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಿರುವ ಇಡಿ ತಂಡವೂ ಪರಿಶೀಲನೆ ನಡೆಸುತ್ತಿದೆ.