ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಶ್ರಮ

ಅಫಜಲಪುರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ಕಾರ್ಯಾಗಾರದಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ, ಶ್ರೀ ವೀರ ಮಹಾಂತ ಶಿವಾಚಾರ್ಯರು, ಶಾಸಕ ಎಂ.ವೈ.ಪಾಟೀಲ್​, ಸಂತೋಷ ಗಂಗೂ, ಸಂಜು ಬಗಲಿ ಇತರರಿದ್ದರು.
ಅಫಜಲಪುರದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ಕಾರ್ಯಾಗಾರದಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ, ಶ್ರೀ ವೀರ ಮಹಾಂತ ಶಿವಾಚಾರ್ಯರು, ಶಾಸಕ ಎಂ.ವೈ.ಪಾಟೀಲ್​, ಸಂತೋಷ ಗಂಗೂ, ಸಂಜು ಬಗಲಿ ಇತರರಿದ್ದರು.
Published on: 

ಅಫಜಲಪುರ: ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸ್ಥಾನವಿದ್ದು, ಭಾವಿ ಪ್ರಜೆಗಳನ್ನು ನಿರ್ಮಿಸುವ ಬಹುದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ. ನಿಮ್ಮೆಲ್ಲ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವೆ ಎಂದು ಶಾಸಕ ಎಂ.ವೈ.ಪಾಟೀಲ್​ ಹೇಳಿದರು.

ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ಕಾರ್ಯಾಗಾರ ಹಾಗೂ ನಿವೃತ್ತಿ ಶಿಕ್ಷಕರು, ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಪ್ರಸ್ತಾವನೆ ಮಾಡುವೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಸಭಾಭವನ ಹಾಗೂ ವಿಶ್ರಾಂತಿ ಗೃಹವನ್ನು ಈಗಿರುವ ಹಳೆಯ ಗುರುಭವನದಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮಳೇಂದ್ರ ಮಠದ ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಮಾತನಾಡಿ, ಸಮಾಜದಲ್ಲಿ ಗುರುವಿನ ಸ್ಥಾನ ಅತ್ಯಂತ ಪವಿತ್ರವಾದದ್ದು. ತಂದೆ-ತಾಯಿ ಮಗುವಿಗೆ ಜನ್ಮ ಕೊಟ್ಟರೆ, ಗುರುಗಳು ಆ ಮಗುವಿಗೆ ವಿದ್ಯೆ ಮತ್ತು ಜೀವನ ಮೌಲ್ಯಗಳನ್ನು ಧಾರೆ ಎರೆದು ಉತ್ತಮ ವ್ಯಕ್ತಿಯಾಗಿ ರೂಪಿಸುತ್ತಾರೆ ಎಂದು ಬಣ್ಣಿಸಿದರು.

ಚಿನ್ಮಯಗಿರಿಯ ಶ್ರೀ ವೀರ ಮಹಾಂತ ಶಿವಾಚಾರ್ಯರು ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಂತೋಷ ಗಂಗೂ, ತಾಲೂಕು ನೌಕರ ಸಂಘದ ಅಧ್ಯಕ್ಷ ಸಂಜು ಬಗಲಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರವಿ ಬಿರಾದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಂಗು ಮೇಳಶಿ, ಗೌರವಾಧ್ಯರಾದ ಗಾಂಧಿ ದಪೆದಾರ್​, ಮುಖ್ಯಗುರುಗಳ ಸಂಘದ ತಾಲೂಕು ಅಧ್ಯಕ್ಷ ಶ್ರೀಕಾಂತ ಕಾಚಾಪುರ, ಪ್ರಮುಖರಾದ ಹೈದರ್​ ಚೌದರಿ, ಮಾಹಿಬೂಬ ಜಮಾದಾರ, ಶಿವಾನಂದ ಪೂಜಾರಿ, ಶೋಭರಾಜ ಮ್ಯಾಳೇಸಿ, ಮಹಿಬೂಬ ಅತನೂರ, ಪಾರುಕ್​ ಮಣ್ಣೂರ್​, ಅಬ್ದುಲ್​ ಸತ್ತಾರ್​, ಮೋಸಾ ಪಟೇಲ್​, ಸುಭಾಷ ಜೇವರ್ಗಿ, ಉಮರ್​, ಸಂಗನಬಸವ ಮುಂಜಗೊಂಡ ಇತರರಿದ್ದರು.

ಗುರುಶಾಂತಯ ಹಿರೇಮಠ ನಿರೂಪಣೆ ಮಾಡಿದರು. ಶಿವಾನಂದ ಸ್ವಾಮಿ ವಂದಿಸಿದರು.