60 ಕಿ.ಮೀ.ವರೆಗೂ ಶಾಲಾ, ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಉಚಿತವಾಗಿ ಸಂಚರಿಸಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಕಲ್ಪಿಸಿರುವುದು ವಿಶೇಷವಾಗಿ ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಹತ್ತರ ವರದಾನವಾಗಲಿದೆ ಎಂದಿದ್ದಾರೆ. ದೂರದ ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಸಾವಿರಾರು ವಿದ್ಯಾರ್ಥಿಗಳಿಗೆ ಯೋಜನೆ ಹೊಸ ಭರವಸೆ ನೀಡಲಿದ್ದು, ಶಾಲೆ&ಕಾಲೇಜು ತೊರೆಯುವ ಪ್ರಮಾಣ ಕಡಿಮೆಯಾಗಲು ಮತ್ತು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ದೊರೆಯಲು ಸಹಕಾರಿ ಆಗಿದೆ ಎಂದು ತಿಳಿಸಿದ್ದಾರೆ.