ಕಲಬುರಗಿ ಜಿಲ್ಲಾಧಿಕಾರಿಯಾಗಿ ಇಕ್ರಮ್​ ಶರೀಫ್​ ಅಧಿಕಾರ ಸ್ವೀಕಾರ

Kalaburgi news DC
Kalaburgi news DC
Published on

ಪ್ರಮುಖ ಮುಖ್ಯಾಂಶಗಳು

  • ಬಿ.ಫೌಜಿಯಾ ತರನ್ನುಮ್​ಗೆ ಬೀಳ್ಕೊಡುಗೆ
  • ಅಧಿಕಾರ ಹಸ್ತಾಂತರ
ಕಲಬುರಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚ್​ನ ಐಎಎಸ್​ ಅಧಿಕಾರಿ ಇಕ್ರಮ ಶರೀಫ್​ (ಮೊಹಮ್ಮದ್​ ಇಕ್ರಮುಲ್ಲಾ ಶರೀಫ್​) ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಅವರಿಂದ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು.
ಸರ್ಕಾರ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಆಯುಕ್ತರಾಗಿ ವರ್ಗಾಯಿಸಿ ಅವರ ಸ್ಥಾನಕ್ಕೆ ಹಣಕಾಸು ಇಲಾಖೆ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್​ ಶರೀಫ್​ ಅವರನ್ನು ನಿಯೋಜಿಸಿತ್ತು.
ಕರ್ನಾಟಕ ಮೂಲದವರಾದ ಇಕ್ರಮ್​ ಶರೀಫ್​ ಅವರು ಅಮೆರಿಕಾದ ವರ್ಜೀನಿಯಾ ವಿಶ್ವವಿದ್ಯಾಲಯದಿಂದ ಬಿಎ (ಅರ್ಥಶಾಸ್ತ್ರ) ಪದವಿ ಪಡೆದಿದ್ದಾರೆ. ಹಿಂದೆ ರಾಮನಗರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾನೆಗೆ ಪಾತ್ರವಾಗಿತ್ತು. ಕಳೆದ 2024ರ ಜುಲೈನಿಂದ ಇದುವರೆಗೆ ಹಣಕಾಸು ಇಲಾಖೆಯಲ್ಲಿ ಆಯ&ವ್ಯಯ ಸಿದ್ಧಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಜಿಪಂ ಸಿಇಓ ಭಂವರ್​ ಸಿಂಗ್​ ಮೀನಾ, ಎಸ್​ಪಿ ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net