ಕಲಬುರಗಿ: ನಗರದ ಖಾಜಾ ಕಾಲನಿಯ ಮನೆಯೊಂದರಲ್ಲಿ ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿ ಇಟ್ಟಿದ್ದ 86 ಸಾವಿರ ರೂ. ಮೌಲ್ಯದ 2540 ಕೆಜಿಯ 51 ಪಾಕೆಟ್ ಪಡಿತರ ಅಕ್ಕಿಯನ್ನು ಪತ್ತೆಹಚ್ಚಿ, ಜಪ್ತಿ ಮಾಡಲಾಗಿದೆ. ಪೊಲೀಸರು, ಆಹಾರ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ಪತ್ತೆ ಮಾಡಿ, ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಓಡಿ ಹೋಗಿದ್ದಾನೆ. ಆಹಾರ ನಿರೀಕ್ಷಕಿ ವಿದ್ಯಾಶ್ರೀ ನೀಡಿದ ದೂರಿನಂತೆ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.