ಬರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್: ರೈತರ ಪ್ರತಿಭಟನೆ

Farmers Protest
Farmers Protest
Published on
ಕಲಬುರಗಿ: ಜಿಲ್ಲೆಯನ್ನು ಬರಪೀಡಿತ ಎಂದು ಘೊಷಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರೈತ ಸಂಘಟನೆಗಳು ಕಲಬುರಗಿ ಬಂದ್ ಘೋಷಣೆ ಹಿನ್ನೆಲೆಯಲ್ಲಿ ಕೇಂದ್ರ ಬಸ್ ನಿಲ್ದಾಣದ ಎದುರು ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಬಸ್ ವ್ಯವಸ್ಥೆ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.
ಬೆಳಗ್ಗೆ 6ಗಂಟೆಯಿಂದಲೇ ರಸ್ತೆಗಿಳಿದಿರುವ ರೈತರು ವಾಹನ ಸಂಚಾರ ಮಾಡುತ್ತಿರುವ ಸಾರ್ವಜನಿಕರಿಗೆ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಕೋರಿದರು.
ಬರ ಘೋಷಣೆ ಮಾಡಬೇಕು, ಪ್ರತಿ ಎಕರೆಗೆ ೫೦ ಸಾವಿರ ರೂ. ಪರಿಹಾರ ನೀಡಬೇಕು, ವಿಮೆಯಿಂದ ವಂಚಿತ ಎಲ್ಲ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಬೇಕು, ಉಜನಿ ಡ್ಯಾಂನಿಂದ ನಿಗದಿತ ೧೫ ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸಂಯುಕ್ತ ಹೋರಾಟ ಕರ್ನಾಟಕ ಸೇರಿದಂತೆ ವಿವಿಧ ರೈತ ಸಂಘಟನೆಗಳು ಹೋರಾಟ ನಡೆಸಿದ್ದು, ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ನಗರದ ವಿವಿಧೆಡೆ ರೈತರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ರೈತರ ಹೋರಾಟಕ್ಕೆ ಅಡತ್​ ಮಾಲಿಕರ ಸಂಘ, ಹೊಟೇಲ್, ಬೇಕರಿ ಮಾಲಿಕರ ಸಂಘದಿಂದ ಬೆಂಬಲ ವ್ಯಕ್ತಪಡಿಸಲಾಗಿದೆ.
ಸಂಯುಕ್ತ ಹೋರಾಟ ಸಂಘಟನೆಯ ಶರಣಬಸಪ್ಪ ಮಮಶೆಟ್ಪಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್., ಕರೆಪ್ಪ ಕರೆಗೊಂಡ, ಗುರಣ್ಣಗೌಡ ಜೇವರ್ಗಿ, ಪದ್ಮಿನಿ ಕಿರಣಗಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net