ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳ ಹಿತ, ತೆರಿಗೆ, ವಿದ್ಯುತ್, ಮೂಲಸೌಕರ್ಯ, ಬ್ಯಾಂಕಿಂಗ್ ಸೇರಿ ಹಲವು ಸಮಸ್ಯೆ, ಸವಾಲುಗಳಿಗೆ ಧ್ವನಿಯಾಗುವ ಜತೆಗೆ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಪ್ರಗತಿಗೂ ಸಂಸ್ಥೆ ನಿರಂತರವಾಗಿ ಹೋರಾಟ ಮಾಡುತ್ತಿದೆ. 371 (ಜೆ) ಅನುಷ್ಠಾನ, ಜಯದೇವ ಹೃದ್ರೋಗ ಸಂಸ್ಥೆ, ಟೆಕ್ಸ್ಟೈಲ್ ಪಾರ್ಕ್ ಸೇರಿ ಹಲವು ಯೋಜನೆಗೆ ಹೋರಾಟ ರೂಪಿಸಿದ್ದು, ಸಂಸ್ಥೆ. ಈ ಭಾಗಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದೆ. ಭವಿಷ್ಯದಲ್ಲಿ ಸಂಸ್ಥೆಯಿಂದ ಉದ್ಯಮ ಪ್ರದರ್ಶನ ಮತ್ತು ತರಬೇತಿ ಕೇಂದ್ರ ಸ್ಥಾಪನೆಯಂತ ಯೋಜನೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.