ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರಿಗೆ ಇದು ಉತ್ತಮ ಅವಕಾಶವಾಗಿದೆ. ಅದಾಲತ್‍ನಲ್ಲಿ ಸಿವಿಲ್ ವ್ಯಾಜ್ಯಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ ಪರಿಹಾರ, ಕಾರ್ಮಿಕ ಹಾಗೂ ಕೌಟುಂಬಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜೊತೆಗೆ, ಚೆಕ್ ಬೌನ್ಸ್ ಪ್ರಕರಣಗಳಿಗಾಗಿಯೇ ಜುಲೈ 18 ರಂದು ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ.