ಕಲಬುರಗಿ: ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಪಿಡಬ್ಲ್ಯುಡಿ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರ ನಿವಾಸ ಹಾಗೂ ಸಂಬಂಧಿತ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬ್ಯಾಂಕ್ ಲಾಕರ್‌ನಲ್ಲಿ ಅಮಾನ್ಯಗೊಂಡ ₹1,000 ಮುಖಬೆಲೆಯ ಸುಮಾರು ₹9 ಲಕ್ಷ ಮೌಲ್ಯದ ನೋಟುಗಳು ಹಾಗೂ 20 ತೊಲೆಗೂ ಅಧಿಕ ಚಿನ್ನಾಭರಣಗಳು ಪತ್ತೆಯಾಗಿವೆ.