

ಕಲಬುರಗಿ: ನಗರಕ್ಕೆ ಬುಧವಾರ ಭೇಟಿ ನೀಡಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಎನ್.ಎ. ಹ್ಯಾರಿಸ್, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಹಾಗೂ ಪದ ವಿವಿಧ ಸಂಘಟನಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಐತಿಹಾಸಿಕ ಖಾಜಾ ಬಂದಾ ನವಾಜ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ವಿವಿಧ ಧಾರ್ಮಿಕ ೇತ್ರಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ಶಾಸಕಿ ಕನೀಜ್ ಫಾತಿಮಾ ನಿವಾಸಕ್ಕೆ ತೆರಳಿ ಸನ್ಮಾನ ಸ್ವೀಕರಿಸಿ ಪದ ಹಿರಿಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿರಣ್ ದೇಶಮುಖ, ಜೆಸ್ಕಾಂ ಅಧ್ಯಕ್ಷ ಪ್ರವಿಣ್ ಪಾಟೀಲ್, ಕೆಪಿಸಿಸಿ ಕಾರ್ಯದರ್ಶಿ ರಾಜ್ ಉಲ್ ಇಸ್ಲಾಂ ಅವರನ್ನು ಭೇಟಿಯಾಗಿ ರಾಜಕೀಯ ಹಾಗೂ ಸಾರ್ವಜನಿಕ ವಿಷಯ ಕುರಿತು ಚರ್ಚಿಸಿದರು.
ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಅವರನ್ನು ಭೇಟಿಯಾಗಿ ವಕ್ಫ್ ಆಸ್ತಿ ರಣೆ, ಸಮುದಾಯದ ಪರ ಆಗಬೇಕಿರುವ ಕೆಲಸಗಳ ಕುರಿತು ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು ಇತರರಿದ್ದರು. ಪದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹ್ಯಾರಿಸ್ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.
ಬೀದರ್: ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಮುದಾಯದಲ್ಲಿ ಒಗ್ಗಟ್ಟು ಮತ್ತು ಪ್ರಗತಿಗಾಗಿ ಇನ್ನಷ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಎನ್.ಎ. ಹ್ಯಾರಿಸ್ ಹೇಳಿದರು. ಕರ್ನಾಟಕ ಅಲ್ಪಸಂಖ್ಯಾತ ಶಾಸಕರ ವೇದಿಕೆ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸೌಹಾರ್ದ ಹಾಗೂ ಸಹಬಾಳ್ವೆ ನೆಲೆ ಬೀದರ್ನಲ್ಲಿ ಅಲ್ಪಸಂಖ್ಯಾತರು ನೀಡಿದ ಗೌರವ ಮತ್ತು ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಮುದಾಯದ ಅಭಿವೃದ್ಧಿಗಾಗಿ ಹಗಲಿರುಳು ಕೆಲಸ ಮಾಡುವೆ ಎಂದು ತಿಳಿಸಿದರು. ಮಾಜಿ ಸಚಿವ ರಹೀಮ್ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯ ಮನ್ನಾನ್ ಸೇಠ್, ಪ್ರಮುಖರಾದ ಮಹ್ಮದ್ ಗೌಸ್, ರೀದ್ ಖಾನ್ ಇತರರಿದ್ದರು. ಇದಕ್ಕೂ ಮುನ್ನ ಹ್ಯಾರಿಸ್ ನಗರದ ಗುರುನಾನಕ್ ಝೀರಾ ಸಾಹೀಬ್ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಸೇರಿ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.