ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕ್ಷೇತ್ರದ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಹಾಪ್ಕಾಮ್ಸ್ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಪ್ರಸ್ತುತ ಶಾಸಕರಾಗಿ ಯಶಸ್ವಿಯಾಗಿ ಆಡಳಿತ ನಡೆಸಿದ್ದಾರೆ. ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿದ್ದು, ಅವರಿಗೆ ಸಚಿವ ಸ್ಥಾನ ನೀಡಿದರೆ ಇನ್ನಷ್ಟು ಸಕ್ರೀಯವಾಗಿ ಕಾರ್ಯನಿರ್ವಹಿಸಿ, ಜನಸೇವೆ ಮಾಡಲಿದ್ದಾರೆ. ಪಕ್ಷದ ಸಂಟನೆಗೂ ಬಲ ನೀಡಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಇಬ್ಬರಿಗೂ ಉನ್ನತ ಸ್ಥಾನಗಳನ್ನು ನೀಡಬೇಕು ಎಂದು ಕೋರಿದ್ದಾರೆ.