

ಕಲಬುರಗಿ: ಕಲಬುರಗಿ ನಗರ ಪೊಲೀಸ್ ಆಯುಕ್ತರಾಗಿದ್ದ ಡಾ.ಶರಣಪ್ಪ ಎಸ್.ಡಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಪೊಲೀಸ್ ಆಯುಕ್ತ ಡಾ.ಶರಣಪ್ಪ ಅವರು ಮೊದಲಿನಿಂದ ದಕ್ಷತೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರು. ರೌಡಿಗಳ ಗ್ಯಾಂಗ್ ಮಟ್ಟ ಹಾಕಿ ಜೂಜು ಅಢ್ಡೆ ಗಳನ್ನು ಬಂದ್ ಮಾಡಿದ್ದರು. ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬಂದಿದ್ದರು. ಅಂತ ಖಡಕ್ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಕೂಡಲೇ ಆದೇಶ ರದ್ದುಪಡಿಸಿ ಕಲಬುರಗಿಯಲ್ಲಿ ಮುಂದುವರೆಸುವಂತೆ ಆಗ್ರಹಿಸಿದ್ದಾರೆ.
ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಜಂಟಿ ಆಯುಕ್ತರ ಆಡಳಿತ ಹುದ್ದೆಗೆ ವರ್ಗ ಮಾಡಲಾಗಿದ್ದು ಆ ಹುದ್ದೆಯಲ್ಲಿ ಇದ್ದ ಕುಲದೀಪಕುಮಾರ ಜೈನ್ ಅವರನ್ನು ಹೊಸದಾಗಿ ಕಲಬುರಗಿ ಪೊಲೀಸ್ ಆಯುಕ್ತರಾಗಿ ನಿಯೋಜಿಸಲಾಗಿದೆ,