ಕಲಬುರಗಿ: ನಾಲ್ಕು ರ‍್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಟನೆ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ. ಬಾಲಕಿ ಮಾನಸಿಕ ಅಸ್ವಸ್ಥಳಾಗಿದ್ದು, ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆದರೆ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಗೆ ಗಾಯಗಳಾಗಿವೆ ಎಂದು ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಿದಾಗ ಅತ್ಯಾಚಾರ ನಡೆದಿರುವುದು ದೃಢೀಕರಿಸಿ, ಎಂಎಲ್ಸಿ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಯ ಪತ್ತೆಗೆ ತಂಡವನ್ನು ರಚಿಸಲಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.