ಶಿಕ್ಷಣದ ಜತೆ ಉತ್ತಮ ಮೌಲ್ಯ ಅಳವಡಿಸಿಕೊಳ್ಳಿ

ಕಲಬುರಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೭೧ನೇ ವಾರ್ಷಿಕೋತ್ಸವದ ಅಂಗವಾಗಿ ಮಾರ್ಗದರ್ಶಿ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಿಶೋರಿಯರಿಗೆ ಉಚಿತ ಸೈಕಲ್ ವಿತರಿಸಲಾಯಿತು. ಶ್ರೀನಿವಾಸ ನವಲೆ, ಕೃಷ್ಣಕುಮಾರ ಪ್ರಭು, ಅನಿಲ್, ಮಂಜುಳಾ ಪಾಟೀಲ್, ಆನಂದರಾಜ್ ಇತರರಿದ್ದರು.
ಕಲಬುರಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೭೧ನೇ ವಾರ್ಷಿಕೋತ್ಸವದ ಅಂಗವಾಗಿ ಮಾರ್ಗದರ್ಶಿ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಿಶೋರಿಯರಿಗೆ ಉಚಿತ ಸೈಕಲ್ ವಿತರಿಸಲಾಯಿತು. ಶ್ರೀನಿವಾಸ ನವಲೆ, ಕೃಷ್ಣಕುಮಾರ ಪ್ರಭು, ಅನಿಲ್, ಮಂಜುಳಾ ಪಾಟೀಲ್, ಆನಂದರಾಜ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಹಿರಿಯ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿಕೆ
  • ಎಸ್‌ಬಿಐ ೭೧ನೇ ವಾರ್ಷಿಕೋತ್ಸವ ಉಚಿತ ಸೈಕಲ್ ವಿತರಣೆ
ಕಲಬುರಗಿ: ಮಕ್ಕಳು ಗೌರವಯುತ ಜೀವನ ನಡೆಸಲು ಶಿಕ್ಷಣದ ಜತೆಗೆ ಉತ್ತಮ ಮೌಲ್ಯಗಳನ್ನೂ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ನವಲೆ ಹೇಳಿದರು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೭೧ನೇ ವಾರ್ಷಿಕೋತ್ಸವದ ಅಂಗವಾಗಿ ಎಸ್‌ಬಿಐ ಹಾಗೂ ಮಾರ್ಗದರ್ಶಿ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಿಶೋರಿಯರಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಏನಾದರೂ ಆಗಲಿ, ಮೊದಲು ಮಾನವರಾಗಿರಿ ಎಂಬ ರಾಷ್ಟçಕವಿ ಕುವೆಂಪು ಅವರ ಸಂದೇಶ ಉಲ್ಲೇಖಿಸಿದ ಅವರು, ಉತ್ತಮ ತಿಳಿವಳಿಕೆ, ಆಧ್ಯಾತ್ಮಿಕತೆ ಹಾಗೂ ಸಂಸ್ಕಾರ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕರು, ಎಸ್‌ಬಿಐ ಹಾಗೂ ಮಾರ್ಗದರ್ಶಿ ಸಂಸ್ಥೆಯ ಸಾಮಾಜಿಕ ಕಾಳಜಿ ಶ್ಲಾಘಿಸಿ, ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವ ಈ ಕಾರ್ಯ ಶ್ಲಾಘನೀಯ ಎಂದು ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣಕುಮಾರ್ ಪ್ರಭು ಮಾತನಾಡಿದರು. ಪ್ರಾಸ್ತಾವಿಕ ಮಾತನಾಡಿದ ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದ್ ರಾಜ್, ಯಾವುದೇ ಹೆಣ್ಣು ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉz್ದೆÃಶದಿಂದ ಈ ಸೈಕಲ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಶಾಲೆಗೆ ಹೋಗಲು ಸಾರಿಗೆ ಸೌಲಭ್ಯ ಕೊರತೆ ಇರುವ ಗ್ರಾಮೀಣ ಭಾಗದ ಬಾಲಕಿಯರಿಗೆ ಅನುಕೂಲವಾಗುವಂತೆ ಸೈಕಲ್ ನೀಡಲಾಗುತ್ತಿದ್ದು, ಬಾಲಕಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಬಾಲ್ಯ ವಿವಾಹ ಮತ್ತು ದೌರ್ಜನ್ಯಗಳಿಂದ ದೂರ ಉಳಿಯಬೇಕು ಎಂಬ ಸಾಮಾಜಿಕ ಕಾಳಜಿಯೂ ಈ ಯೋಜನೆಯ ಹಿಂದಿದೆ ಎಂದು ಹೇಳಿದರು.
ಎಸ್‌ಬಿಐ ಪ್ರಾಂತೀಯ ವ್ಯವಸ್ಥಾಪಕ ಅನಿಲ್, ಎಸ್‌ಬಿಐ ಮುಖ್ಯ ಕಚೇರಿಯ ಸುದೀಪ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮನೋಹರ್, ಯಲ್ಲೂಬಾಯಿ, ಶ್ರೀದೇವಿ ಕಟ್ಟಿಮನಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net