ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ ಅವರು ,ಒಂದೆಡೆ ಸಿದ್ದರಾಮಯ್ಯ ಅವರು ತಾವೇ ಐದು ವರ್ಷ ಸಿಎಂ ಆಗಿ ಮುಂದುವರಿಯುವುದಾಗಿ ಹೇಳುತ್ತಾ, ತಾನೇ ಹೈಕಮಾಂಡ್ ಎಂಬಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಈಗಾಗಲೇ ನಿರ್ಧಾರವಾಗಿದೆ, ಎರಡುವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರವಿದೆ ಎನ್ನುತ್ತಾರೆ. ಇನ್ನೂ, ಹೈಕಮಾಂಡ್ ಸ್ಥಾನದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಈ ಗೊಂದಲಗಳನ್ನು ರಾಜ್ಯದಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಜಾರಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.