

ಕಲಬುರಗಿ: ನಗರದ ಹೃದಯ ಭಾಗದಲ್ಲಿರುವ ಸರಾಫ್ ಬಜಾರ್ನ ಚಿನ್ನಾಭರಣ ಮಳಿಗೆಯಲ್ಲಿ ಕೆಲಸ ಮಾಡುತ್ತ ಉಗ್ರರೊಂದಿಗೆ ಸಂಪರ್ಕ ಹೊಂದಿದ ಶಂಕಿತನೊಬ್ಬನನ್ನು ಕೇಂದ್ರೀಯ ಗುಪ್ತಚರ ಸಂಸ್ಥೆ, ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಶನಿವಾರ ವಶಕ್ಕೆ ಪಡೆದಿದ್ದಾರೆ.. ಪಶ್ಚಿಮ ಬಂಗಾಳ ಮೂಲದ ಮಲೀಕ್ ಬಂಧಿತ ಆರೋಪಿ.
ಭಯೋತ್ಪಾದಕ ಸಂಟನೆ ಲಷ್ಕರ್ ಇ ತಯ್ಯಬಾದ ಉಗ್ರರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕ ಹೊಂದಿದ್ದ ಎಂಬ ಆಧಾರದ ಮೇಲೆ ಕೇಂದ್ರೀಯ ಗುಪ್ತಚರ ಸಂಸ್ಥೆ ಅಧಿಕಾರಿಗಳು, ನಗರ ಪೊಲೀಸರು ನಿಗಾ ಇಟ್ಟಿದ್ದು, ಪರಿಶೀಲನೆ ಬಳಿಕ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಸರ್ಾ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಮ್ತಾಜ್ವುಲ್ ಮಲೀಕ್ ಬಂಧಿತ ಶಂಕಿತ. ಸಹೋದರನ ಜತೆಗೆ ಕಳೆದ ಎರಡು ವರ್ಷದಿಂದ ನಗರದಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಆಭರಣ ತಯಾರಿಕೆ ಕೆಲಸ ಮಾಡುತ್ತಿದ್ದ. ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್ ಇ ತಯ್ಯಬಾದ ಖಾತೆದಾರರೊಂದಿಗೆ ಸಂಪರ್ಕ ಹೊಂದಿದ್ದ. ಹಲವು ಮಹತ್ವದ ವಿಷಯಗಳನ್ನು ಮೆಸೇಜ್ ಮೂಲಕ ಹಂಚಿಕೊಂಡಿದ್ದ ಎಂದು ತಿಳಿದು ಬಂದಿದೆ. ಬ್ರಹ್ಮಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಎರಡು ತಿಂಗಳಲ್ಲೇ ಮತ್ತೊಬ್ಬ ಪತ್ತೆ: ಆಗಸ್ಟ್ನಲ್ಲಿ ಕಲಬುರಗಿ ಹೊರವಲಯದ ಮಾಲಗತ್ತಿ ಬಳಿಯ ಕಸಾಯಿ ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲಕ ಮೊಹ್ಮದ್ ಸಮೀರ್ ಎಂಬಾತನನ್ನು ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬ ಶಂಕಿತನನ್ನು ಬಂಧಿಸಲಾಗಿದೆ.