ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳು ಪರಾರಿ

prisoners escape from Kalaburagi Central Jail
prisoners escape from Kalaburagi Central Jail
Published on
ಕಲಬುರಗಿ: ನಗರದ ಹೊರವಲಯದ ಹೆದ್ದಾರಿಯಲ್ಲಿರುವ ಕೇಂದ್ರ ಕಾರಾಗೃಹದಿಂದ (ಸೆಂಟ್ರಲ್ ಜೈಲು) ಮೂವರು ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ.
ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದ್ದು, ಮಂಗಳವಾರ ನಸುಕಿನ ಜಾವ ೩ ಗಂಟೆ ಸುಮಾರಿಗೆ ಕೈದಿಗಳು ಜೈಲಿನ ಎತ್ತರದ ಕಾಂಪೌಂಡ್ ಗೋಡೆಯನ್ನು ಹಾರಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರದಲ್ಲೆ ಘಟನೆ ನಡೆದಿದ್ದು, ಜೈಲಿನ ಭದ್ರತಾ ವ್ಯವಸ್ಥೆ ಮೇಲೆ ಪ್ರಶ್ನೆ ಮೂಡಿಸಿದೆ.
 ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾರಾಗೃಹದ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಜೈಲಿನ ಸುತ್ತಮುತ್ತ ಹಾಗೂ ನಗರದಾದ್ಯಂತ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಕಲಬುರಗಿ ತಾಲೂಕಿನ ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳೀಯ ಪೊಲೀಸರು ಕೂಡ ಜೈಲು ಸಿಬ್ಬಂದಿಯೊಂದಿಗೆ ಜಂಟಿ ಕಾರ್ಯಾಚರಣೆಗೆ ಇಳಿದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡುತ್ತಿದ್ದಾರೆ. ಬಿಗಿ ಭದ್ರತೆಯ ನಡುವೆಯೂ ಕೈದಿಗಳು ಹೇಗೆ ತಪ್ಪಿಸಿಕೊಂಡರು ಎಂಬುವ ಮಾಹಿತಿ ಕಲೆಹಾಕುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net