ಕಲಬುರಗಿ ಶರಣಬಸವೇಶ್ವರ ಕಾಮರ್ಸ್ ಕಾಲೇಜಿನಲ್ಲಿ ಗುರುವಾರ ನಡೆದ ಯುವ ಸಂಸತ್ ಸ್ಪರ್ಧೆಯಲ್ಲಿ ಶರಣಬಸವ ವಿವಿ ಕುಲಪತಿ ಡಾ.ಅನೀಲಕುಮಾರ ಬಿಡವೆ, ಯುವ ಅಧಿಕಾರಿ ಮಯೂರಕುಮಾರ ಗೊರ್ಮೆ, ಪ್ರಾಚಾರ್ಯ ಡಾ.ದಶರಥ ಮೇತ್ರೆ, ಪ್ರೊ.ದಯಾನಂದ ಹೊಡಲ್ ಇತರರಿದ್ದರು.
ಕಲಬುರಗಿ:ವಿದ್ಯಾರ್ಥಿಗಳು ನಾಯಕತ್ವ ಗುಣ, ಆತ್ಮವಿಶ್ವಾಸ, ಚರ್ಚಾ ಕೌಶಲ ಮತ್ತು ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳುವುದು ಅಗತ್ಯ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ.ಅನೀಲಕುಮಾರ ಬಿಡವೆ ಹೇಳಿದರು.
ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರದ ಮೈ ಭಾರತ ಯುವಜನ ಸೇವೆ ಇಲಾಖೆ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಸಹಯೋಗದಡಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂಥ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಲು ನೆರವಾಗಲಿವೆ. ಜಗತ್ತಿನ ಎಲ್ಲ ರಾಷ್ಟçಗಳಿಗಿಂತ ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟç. ೨೦೪೭ರಲ್ಲಿ ವಿಕಸಿತ ಭಾರತದ ಆಶಯ ಸಾಕಾರಗೊಳಿಸುವಲ್ಲಿ ಯುವ ಜನತೆಯ ಪಾತ್ರ ಬಹಳಷ್ಟಿದೆ ಎಂದರು.
ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೊರ್ಮೆ ಮಾತನಾಡಿ, ಇದು ಕೇವಲ ಸ್ಪರ್ಧೆಯಲ್ಲ, ನಿಮ್ಮೊಳಗಿನ ನಾಯಕತ್ವ ಗುಣ ಹೊರತರುವ ಒಂದು ವೇದಿಕೆ. ದೇಶದ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡಿ ಉತ್ತಮ ಪರಿಹಾರ ನೀಡುವ ಅಭ್ಯಾಸ ಬೆಳೆಸುತ್ತದೆ ಎಂದು ಹೇಳಿದರು.
ನAತರ ತುರ್ತು ಪರಿಸ್ಥಿತಿ ೫೦ ವರ್ಷ: ಭಾರತೀಯ ಪ್ರಜಾಸತ್ತಾತ್ಮಕತೆಗೆ ಸಿಕ್ಕ ಪಾಠಗಳು ವಿಷಯ ಕುರಿತು ೧೫೦ಕ್ಕೂ ಹೆಚ್ಚು ಜನರು ಅನಿಸಿಕೆ ವ್ಯಕ್ತಪಡಿಸಿದರು.
"
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅರಿಯಲು ಮತ್ತು ಸಂಸತ್ತಿನ ಕಾರ್ಯವಿಧಾನ ತಿಳಿದುಕೊಳ್ಳಲು ಈ ಕಾರ್ಯಕ್ರಮ ಒಳ್ಳೆಯ ಅವಕಾಶ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುವ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳಬೇಕು.