ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯP್ಷÀ ರಾಜು ಲೇಂಗಟಿ ಮಾತನಾಡಿ, ೧೭ರಂದು ಸಂಜೆ ೬.೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಸೊನ್ನದ ಶ್ರೀ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ, ಶಹಾಪುರ ಪ್ರಥಮ ದರ್ಜೆ ಗುತ್ತಿಗೆದಾರ ದೇವಿಂದ್ರಪ್ಪಗೌಡ ಗೌಡಗೇರ ಅಧ್ಯP್ಷÀತೆ ವಹಿಸುವರು. ೧೮ರ ಕಾರ್ಯಕ್ರಮದಲ್ಲಿ ಉದ್ಯಮಿ ಶಿವಕಾಂತ ಮಹಾಜನ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಹೋರಾಟಗಾರ ಲಚ್ಚಪ್ಪ ಜಮಾದಾರ್ ಮುಖ್ಯ ಅತಿಥಿಗಳಾಗಿರುವರು. ೧೯ರಂದು ಬೆಳಗ್ಗೆ ೧೦ಕ್ಕೆ ಜಗದ್ಗುರು ಪರಮಶಿವ ರಾಜದೇಶಿಕೇಂದ್ರ ಸ್ವಾಮೀಜಿ ಗದ್ದುಗೆಗೆ ರುದ್ರಾಭಿಷೇಕ, ಶಿವಾಷ್ಟೋತ್ತರ ನಾಮಾವಳಿ, ಮಂಗಳಾರತಿ, ಶ್ರೀಗಳ ಪ್ರವಚನ ಜತೆ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಇರಲಿದೆ ಎಂದು ವಿವರಿಸಿದರು.