9 ರಂದು ಕಲಬುರಗಿ ನಗರ ವ್ಯಾಪ್ತಿಯ ಜನತಾ ದರ್ಶನ

Priyank Kharge
Published on


ಕಲಬುರಗಿ : ನಗರದ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಜ.೯ ರಂದು ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ  ನಗರ ಪ್ರದೇಶ ವ್ಯಾಪ್ತಿಗೆ ಸೀಮಿತಗೊಳಿಸಿ ಜನತಾ ದರ್ಶನ ಮತ್ತು ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಪತ್ರಕರ್ತರಿಗೆ ತಿಳಿಸಿದರು. ಕಲಬುರಗಿ ದಕ್ಷಿಣ ಮತ್ತು ಕಲಬುರಗಿ ಉತ್ತರ ಮತಕ್ಷೇತ್ರದ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹಸಿಕೊಳ್ಳಹುದಾಗಿದೆ.
 ಕಲಬುರಗಿ ನಗರದಲ್ಲಿನ ವಿವಿಧ ಸಮಸ್ಯೆಗಳ ಕುರಿತು ಜನರು ನೇರವಾಗಿ ಕೇಳಿ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜನಸ್ಪಂದನಾ ಸಭೆ ಆಯೋಜಿಸಿದೆ. ಸಾರ್ವಜನಿಕರು ಅಗತ್ಯ ದಾಖಲಾತಿಗಳೊಂದಿಗೆ  ಅಂದು ಬೆಳಿಗ್ಗೆ ೧೦.೩೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ಅಹವಾಲು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಚಿಂಚೊಳಿಯಲ್ಲಿ ಜರುಗಿದ ಚೊಚ್ಚಳ ಜನತಾ ದರ್ಶನದಲ್ಲಿ ೬೧೨ ಅರ್ಜಿಗಳಲ್ಲಿ ೬೦೬ ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ೬ ಮಾತ್ರ ಬಾಕಿ ಉಳಿದಿವೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net