ಕಲಘಟಗಿ ಕರೆಂಟ್ ಸಮಸ್ಯೆ ಚರ್ಚೆ

IMG-20250220-WA0031.jpg
Published on

ಹುಬ್ಬಳ್ಳಿ: ಕಲಘಟಗಿ ಹಾಗೂ ಅಳ್ನಾವರ ಭಾಗದಲ್ಲಿ ರೈತರಿಗೆ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಗಳ ಬಗ್ಗೆ ಮಾಜಿ ಎಂಎಲ್ಸಿ ನಾಗರಾಜ ಛಬ್ಬಿ ಅವರು ಸಂಬಂಧಿಸಿದ ಇಲಾಖೆಯೊಂದಿಗೆ ಮಾತುಕತೆ ಮಾಡುವ ಮೂಲಕ ಬಗೆ ಹರಿಸುವ ಪ್ರಯತ್ನ ಮಾಡಿದರು.

ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗದೇ ಸಮಸ್ಯೆ ಆಗುತ್ತಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಆದೇಶದ ಮೇರೆಗೆ ಮಾಜಿ ಎಂಎಲ್ಸಿ ನಾಗರಾಜ ಛಬ್ಬಿ ಅವರ ನೇತೃದಲ್ಲಿ ರೈತರು ಹಾಗೂ ಮುಖಂಡರು ನವನಗರ ಬಳಿಯ ಹೆಸ್ಕಾಂ ಕಚೇರಿಗೆ ಭೇಟಿ ನೀಡಿ ಸಮಸ್ಯೆ ಹೇಳಿಕೊಂಡರು.

ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಖಾದ್ರಿ ಹಾಗೂ ಹೆಸ್ಕಾಂ ಎಂಡಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಛಬ್ಬಿ ಅವರು ರೈತರು, ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಸಮಸ್ಯೆ ಆಲಿಸಿದ ಹೆಸ್ಕಾಂ ಅಧ್ಯಕ್ಷರು, ಅಧಿಕಾರಿಗಳು ಶೀಘ್ರ ಬಗೆ ಹರಿಸುವ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತ್ತಗಟ್ಟಿ, ತಾಲೂಕಿನ ರೈತ ನಾಯಕರು, ಮಂಡಲ ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net