

ನವಲಗುಂದ: ತಾಲೂಕಿನಲ್ಲಿ ಸತತವಾಗಿ ಸುರಿದ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು,ನಿರಾಶ್ರಿತ ಹನಸಿ ಗ್ರಾಮದ ಜನರಿಗೆ ಗುರುವಾರ ರಾತ್ರಿ ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ತಹಸೀಲ್ದಾರ್ ಸುಧೀರ ಸಾಹುಕಾರ ತಿಳಿಸಿದ್ದಾರೆ.
ಹನಸಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸುಮಾರು 270ಕ್ಕೂ ಹೆಚ್ಚು ಜನ ನಿರಾಶ್ರಿತಗಿದ್ದು ತಾಲೂಕಾಡಳಿತ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.
ಬೆಣ್ಣಿಹಳ್ಳ, ತುಪ್ಪರಿಹಳ್ಳ ಸೇರಿದಂತೆ ವಿವಿಧ ಹಳ್ಳಗಳ ದಡಲಿರುವ ಜನರು ತಮ್ಮ ಜಾನುವಾರಗೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.