ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯಿರಿ

KLK-3-1
Published on

ಕಲಕೇರಿ: ಗ್ರಾಮದಲ್ಲಿ ಶಾಲೆ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಲಸಿಕೆ ಪಡೆದುಕೊಳ್ಳಬೇಕೆಂದು ಕಲಕೇರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಶಶಿಕಾಂತ ಬಾಗೇವಾಡಿ ಹೇಳಿದರು.

ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಸಂಯುಕ್ತ ಪಪೂ ಮಹಾವಿದ್ಯಾಲಯದ ಆವರಣದಲ್ಲಿ ಸೋಮವಾರ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 15ರಿಂದ 18 ವರ್ಷದೊಳಗಿನ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್‌ನಿಂದಾಗುವ ತೊಂದರೆ ದೂರಮಾಡಲು ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net