ಚಿತ್ರಕಲೆ ನಾಗರಿಕತೆಯ ಭದ್ರ ಬುನಾದಿ : ಡಾ.ತುಕಾರಾಮ ಪೂಜಾರಿ ಅಭಿಮತ

New Project (4)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಸ್ಕೃತಿ ಮೊದಲಾದ ವಿಷಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸೃಜನಶೀಲವಾಗಿ ಆಲೋಚಿಸಬೇಕು ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ತುಕಾರಾಮ ಪೂಜಾರಿ ಹೇಳಿದರು.

ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ, ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಆಯೋಜಿಸಿದ ‘ಕಲಾ ನಿಧಿ-2025’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕ ಜಿ.ಎಸ್.ಶಶಿಧರ್, ಮುಖ್ಯ ಶಿಕ್ಷಕಿ ಸುಶೀಲಾ ವಿಟ್ಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಶಂಕರ ರಾವ್ ಮಂಚಿ, ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮಿತಿ ಸದಸ್ಯೆ ಮನೋರಂಜಿನಿ ರಾವ್ ಉಪಸ್ಥಿತರಿದ್ದರು.

ಕಲಾವಿದ ಶಿಕ್ಷಕ ಅರವಿಂದ ಕುಡ್ಲ ಮಕ್ಕಳಿಗೆ ಓರಿಗಾಮಿ ಕಲೆ ಬಗ್ಗೆ ತರಬೇತಿ ನೀಡಿದರು. ಗೋಪಾಡ್ಕರ್ ಕ್ರಿಯೇಟಿವ್ ಆರ್ಟ್ ಬಗ್ಗೆ ಮಾಹಿತಿ ನೀಡಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಪುರಸ್ಕೃತರ ಚಿತ್ರಕಲಾ ಪ್ರದರ್ಶನ ನಡೆಯಿತು. ಕಲಾವಿದ ಮೋಹನ್ ಕುಮಾರ್ ಪೆರ್ಮುದೆ ಸ್ವಾಗತಿಸಿದರು. ಕಲಾನಿಧಿ ಗೋಪಾಡ್ಕರ್ ಪ್ರಸ್ತಾವಿಸಿದರು. ಬಾಲಕೃಷ್ಣ ಶೆಟ್ಟಿ ವಂದಿಸಿದರು. ಕಲಾವಿದ ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.

ಕಲಾನಿಧಿ ಪ್ರಶಸ್ತಿ ಪ್ರದಾನ

2023ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ಕಲಾವಿದ ವೆಂಕಿ ಪಲಿಮಾರು, 2024ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ವಿ.ಕೆ.ವಿಟ್ಲ ಹಾಗೂ 2025ನೇ ಸಾಲಿನ ಕಲಾನಿಧಿ ಪ್ರಶಸ್ತಿಯನ್ನು ರಾಜೇಶ್ವರಿ ಕೆ. ಮಂಗಳೂರು ಅವರಿಗೆ ಪ್ರದಾನ ಮಾಡಲಾಯಿತು.

ಸಾವಿರ ಪದಗಳಲ್ಲಿ ಹೇಳುವುದನ್ನು ಒಂದು ಕಲಾಕೃತಿ ಮೂಲಕ ತಿಳಿಸಬಹುದು. ಭಾವನೆಗಳನ್ನು ಪ್ರಸ್ತುತಪಡಿಸಲು ಚಿತ್ರ ಬಹುದೊಡ್ಡ ಮಾಧ್ಯಮ. ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ಪ್ರತಿಯೊಬ್ಬರೂ ಮಗ್ನರಾಗಬೇಕು. ಜಿ.ಎಸ್.ಶಶಿಧರ್, ಉಪನಿರ್ದೇಶಕ, ಶಿಕ್ಷಣ ಇಲಾಖೆ, ದ.ಕ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net