ಮಾನವೀಯತೇ ಬಿದ್ದರೆ ಕಟ್ಟಲಾಗದು: ಕ್ಕಿರೇಶ್ವರ ಶ್ರೀಗಳು

26GDG05
Published on

ವಿಜಯವಾಣಿ ಸುದ್ದಿಜಾಲ ಗದಗ
ಮಂದಿರ, ಮಸೀದಿ, ಚರ್ಚಗಳನ್ನು ಕಟ್ಟಿದರೆ ಒಂದು ದಿನ ಅವು ಬೀಳುತ್ತವೆ. ಬಿದ್ದ ಮೇಲೆ ಅವುಗಳನ್ನು ಮೊದಲಿಗಿಂತ ಚೆನ್ನಾಗಿ ಮರು ನಿಮಿರ್ಸಬಹುದು. ಆದರೆ, ಮಾನವನಲ್ಲಿರುವ ಮಾನವೀಯತೆಯ ಮಂದಿರ ಬಿದ್ದರೆ ಅದನ್ನು ಮರುಕಟ್ಟಲು ಸಾಧ್ಯವಿಲ್ಲ ಎಂದು ಓಂಕಾರೇಶ್ವರ ಮಠದ ಕ್ಕೀರೇಶ್ವರ ಶ್ರಿಗಳು ಹೇಳಿದರು.
ತಾಲೂಕಿನ ಕಳಸಾಪುರ ಗ್ರಾಮದ ಈಶ್ವರ ದೇವರ ಹಾಗೂ ಬಸವಣ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಸಮವಾರ ಏರ್ಪಡಿಸಿದ್ದ ಶಿವಶರಣೆ ಗುಡ್ಡಾಪುರ ದಾನಮ್ಮದೇವಿ ಪುರಾಣ ಪ್ರವಚನ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದಅವರು, ಮಾನವೀಯತೆ ಎನ್ನುವ ಮಂದಿರವೇ ಶ್ರೇಷ್ಠ ಮಂದಿರವಾಗಬೇಕು. ಜಾತಿಯಿಂದ ದೂರ ಇದ್ದು ನೀತಿಯಿಂದ ಬಾಳಬೇಕು. ಅಂತೆಯೇ ಶರಣ ಶರಣೆಯರು ಬದುಕಿದರು. ಅಂತವರ ಜೀವನ ಅವರ ಬದುಕು ನಮ್ಮ ಜೀವನಕ್ಕೆ ಜೀವಜಲ ಆದಾಗ ಅಂತರಂಗದ ದೀಪ ಬೆಳಗುತ್ತದೆ. ದಾನಮ್ಮ ದೇವಿಯ ಜೀವನ ದರ್ಶನ, ಪ್ರವಚನ ಕೇಳಿ ಎಲ್ಲರೂ ಕೂಡ ಶರಣರು ಆಗಲು ಸಾಧ್ಯವೆಂದು ಹೇಳಿದರು.
ಪ್ರವಚನಕಾರ ಶಿವಲಿಂಗಯ್ಯಶಾಸ್ತ್ರಿ ಸಿದ್ದಾಪುರವರು ಮಾತನಾಡಿ, ಗುಡ್ಡಾಪುರದ ದಾನಮ್ಮ ದೇವಿಯ ಪ್ರವಚನದಲ್ಲಿ ಮನುಷ್ಯ ಜೀವನದಲ್ಲಿ ಬದುಕಿಗೆ ಬೆಳಕಾಗುವಂತಹ ಎರಡು ಒಳ್ಳೆಯ ಮಾತನ್ನು ಕೇಳಬೇಕು. ರಾಮಕೃಷ್ಣ ಪರಮಹಂಸರ ಸಂದಿಂದ ಅವರ ಒಳ್ಳೆಯ ಮಾತಿನಿಂದ ನರೇಂದ್ರಸ್ವಾಮಿ ವಿವೇಕಾನಂದ ಆದರು. ಅದೇರೀತಿ ಗುರುಗೋವಿಂದರ ಮಾತಿನಿಂದ ಷರೀ್​ ಸಾಹೇಬರು ಶಿವಯೋಗಿ ಆದರು. ಹಾನಗಲ್​ ಕುಮಾರ ಶಿವಯೋಗಿಯವರ ಮಾತಿನಿಂದ ಪಂ.ಪಂಚಾರಿ ಗವಾಯಿಗಳು ಪ್ರಪಂಚದ ಅಂಧ ಅನಾಥ, ದೀನ ದಲಿತರ ಮಕ್ಕಳಿಗೆ ಸಂಗೀತ ವಿದ್ಯೆಯನ್ನು ದಾರೆ ಎರೆದು ಅವರ ಬಾಳ ಬೆಳಗಿ ಸಂಗೀತ ಲೋಕದ ಋಷಿಯಾದರು. ಹಾಗೆ ದಾನಮ್ಮದೇವಿ ಗುರು ಶಾಂತವೀರ ಮಹಾಸ್ವಾಮಿಗಳ ಸೇವೆ ಮಾಡಿ ಅವರ ಶರಣೆ ಆದರು. ದಾನಮ್ಮನ ಬದುಕಿನ ಧ್ಯಾನದ ಬೆಳಕು ನಮ್ಮೆಲ್ಲರ ಹೃದಯಗಳನ್ನು ಬೆಳಗುವಂತಾಗಲಿ ಎಂದರು.
ನಿತ್ಯ ನಡೆಯುವ ಪ್ರವಚನ ಕೇಳಿ ನಮ್ಮ ಮನಸ್ಸಿನ ಪಾಪಗಳು ಸುಟ್ಟು ಹೋಗುತ್ತವೆ. ಅಕ್ಕಮಹಾದೇವಿ ಒಳ್ಳೆಯ ಮಾತುಗಳು ಹೇಳುವಂತವರ ಸಂವನ್ನೇ ಕರುಣಿಸು ಚೆನ್ನಮಲ್ಲಿಕಾರ್ಜುನ ಎಂದು ಪ್ರಾರ್ಥನೆ ಮಾಡಿದ್ದಾಳೆ. ಅಕ್ಕಮಹಾದೇವಿಯಂತೆ ನಮ್ಮೆಲ್ಲರ ಜೀವನ ಆಗಲಿ ಎಂದರು.
ಸಂಗಮೇಶ್ವರ ಗವಾಯಿ ಪಾಟೀಲ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net