

ಕಲಬುರಗಿ: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್‌ನಲ್ಲಿ ಬಸವೇಶ್ವರ ಪುತ್ಥಳಿಯನ್ನು ವಿರೂಪಗೊಳಿಸಿ ಅಪಮಾನ ಮಾಡಿದನ್ನು ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕಲ್ಯಾಣರಾವ ಪಾಟೀಲ್ ಕಣ್ಣಿ ಖಂಡಿಸಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವ ಕೆಲಸ ನಡೆಯುತ್ತಿದ್ದು, ಸಮಾನತೆಯನ್ನು ಬೋಧಿಸಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಶ್ರಮಿಸಿದ ಬಸವಣ್ಣನವರ ಮೂರ್ತಿಗೆ ಅಪಮಾನ ಇಡೀ ನಾಗರಿಕ ಸಮಾಜಕ್ಕೆ ಮಾಡಿದ ಅಪಮಾನ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕು. ನೂತನ ಮೂರ್ತಿಯನ್ನು ಅದೇ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಕಲಬುರಗಿಯಲ್ಲೂ ಹೋರಾಟ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.