"ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿಯದ್ದು ಕರ್ಣನ ಪರಿಸ್ಥಿತಿ"

Kalyana Karnataka Bellary Program
Published on

ಬಳ್ಳಾರಿ: ಕಲ್ಯಾಣ ಕರ್ನಾಟಕ ಆರು ಜಿಲ್ಲೆಗಳನ್ನು ಒಳಗೊಂಡಿದೆ. ಕುಂತಿಯ ಆರು ಪುತ್ರರಲ್ಲಿ ಕರ್ಣನಂತೆ ಬಳ್ಳಾರಿಯ ಪರಿಸ್ಥಿತಿಯಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಎಸ್.ಪನ್ನರಾಜ ಅಭಿಪ್ರಾಯ ಪಟ್ಟರು.

ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. 1990ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾದಾಗ ಬಳ್ಳಾರಿ ಜಿಲ್ಲೆ ಸೇರ್ಪಡೆ ಮಾಡಿರಲಿಲ್ಲ. ಹೋರಾಟದ ಮೂಲಕ ಸೇರ್ಪಡೆಯಾಗಬೇಕಾಯಿತು ಎಂದರು.

ಬಳ್ಳಾರಿ ಜಿಲ್ಲೆ 1947 ಆ.15ರಂದೇ ಸ್ವಾತಂತ್ರ್ಯ ಪಡೆದಿದ್ದರೂ ಸಾಂಸ್ಕೃತಿಕ ಹಾಗೂ ಸಮಸ್ಯಾತ್ಮಕವಾಗಿ ಕಲ್ಯಾಣ ಕರ್ನಾಟಕದ ಇತರ ಜಿಲ್ಲೆಗಳೊಂದಿಗೆ ಸಾಮ್ಯತೆ ಹೊಂದಿದೆ. 1792ರಿಂದ 1800ರವರೆಗೆ ಜಿಲ್ಲೆ ನವಾಬನ ಆಡಳಿತಕ್ಕೆ ಒಳಪಟ್ಟಿತ್ತು. 1800ರಲ್ಲಿ ನವಾಬ ಬ್ರಿಟಿಷರ ನೆರವು ಕೋರಿದಾಗ ಬಳ್ಳಾರಿ ಜಿಲ್ಲೆ ಮದ್ರಾಸ್ ಪ್ರಾಂತಕ್ಕೆ ಸೇರಿತು. 1963ರಿಂದ ಬಳ್ಳಾರಿ ಜಿಲ್ಲೆ ಕಲಬುರಗಿ ವಿಭಾಗದ ಆಡಳಿತಕ್ಕೆ ಒಳಪಟ್ಟಿದೆ. ಆದರೂ, ಜಿಲ್ಲೆಯನ್ನು ಕಡೆಗಣಿಸಲಾಗುತ್ತಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕ ಉತ್ಸವ ನಮಗೆ ಸಂಭ್ರಮ ತಂದಿದೆಯಾ ಎಂದು ಪ್ರಶ್ನಿಸಿಕೊಳ್ಳಬೇಕಿದೆ ಎಂದು ಎಸ್.ಪನ್ನರಾಜ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಜಿ.ಸೋಮಶೇಖರ ರೆಡ್ಡಿ, ಎಂಎಲ್ಸಿಗಳಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net