ಕಳೆಂಜ ಮನೆ ನಿರ್ಮಾಣ ವಿಚಾರ ಸ್ಥಳದಲ್ಲಿ ಬಿಗುವಿನ ವಾತಾವರಣ

IMG-20231009-WA0011
Published on

ಬೆಳ್ತಂಗಡಿ; ಕಳೆಂಜ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಗೊಳಿಸಲು ಮುಂದಾಗಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ಭೇಟಿ ನೀಡಿದ್ದು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.


ಕಳೆಂಜ ಗ್ರಾಮದ ಅಮ್ಮಿಡ್ಕಿ ಕುದ್ದಮನೆ ಸೇಸ ಗೌಡ ಹಾಗೂ ಕುಟುಂಬಸ್ಥರು ಈ ಜಮೀನನ್ನು ತಲತಲಾಂತರದಿಂದ ವಶದಲ್ಲಿ ಇಟ್ಟುಕೊಂಡಿದ್ದರು ಎನ್ನಲಾಗಿದೆ .‌ ಸದ್ರಿ ಜಾಗದಲ್ಲಿ ಇದೀಗ ಅವರ ಕುಟುಂಬಸ್ಥರು ಹೊಸದಾಗಿ ಮನೆ ಕಟ್ಟಲು ಮುಂದಾಗಿದ್ದರು. ಪೌಂಡೇಶನ್ ಕೆಲಸ ಆರಂಭಿಸಿದ ಬೆನ್ನಲ್ಲಿಯೇ ಕಳೆದ ವಾರ ಅರಣ್ಯ ಇಲಾಖೆಯವರು ಈ ಜಮೀನು 309 ಸರ್ವೆ ನಂಬರ್ ನಲ್ಲಿದ್ದು ಇದು ಅರಣ್ಯ ಇಲಾಖೆಯ ಜಾಗ ಎಂದು ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ತಾತ್ಕಾಲಿಕವಾಗಿ ತೆರವು ಕಾರ್ಯಾಚರಣೆಯನ್ನು ತಡೆ ಹಿಡಿದಿದ್ದರು.


ಇದೀಗ ಇಂದು ಬೆಳಿಗ್ಗೆಯೇ ಅರಣ್ಯ ಇಲಾಖೆಯವರು ಅಕ್ರಮ ಕಟ್ಟಡ ತೆರವಿಗೆ ಮುಂದಾಗಿದ್ದರು ಇದರ ಮಾಹಿತಿ ತಿಳಿದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಭಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯಾಚರಣೆಯನ್ನಿ ತಡೆದಿದ್ದಾರೆ ವೇಳೆ ನೂಕು ನುಗ್ಗಲು ಸಂಭವಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸ್ಥಿತಿ ಎದುರಾಗಿತ್ತು.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ಕೆ. ಎಸ್.ಆರ್.ಪಿ ಯ ವಿಶೇಷ ಪಡೆಯನ್ನು ನಿಯೋಜಿಸಲಾಗಿದೆ ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net