

ಮಂಗಳೂರು : ಕೇಂದ್ರ ಸರ್ಕಾರದ ಮೀನುಗಾರಿಕೆ , ಪಶುಸಂಗೋಪನಾ ಮತ್ತು ಹೈನುಗಾರಿಕೆ ಸಚಿವ ಪರ್ಷೋತ್ತಮ ರೂಪಾಲ ಭಾನುವಾರ ನಗರದ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ ಕೇಶವ ಆಚಾರ್ಯ, ಕಾರ್ಪೊರೇಟರ್ ಸಂಧ್ಯಾ ಬಿ ಮೋಹನ್ ಉಪಸ್ಥಿತರಿದ್ದರು.