ಕಳ್ಳಬಟ್ಟಿ ಸಾರಾಯಿ ದಂಧೆ ತಡೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಕನ್ನಾಳ ಗ್ರಾಪಂ ಅಧ್ಯಕ್ಷ !

Kallabatti Sarayi Arrack Alcohol
Published on

ಮಸ್ಕಿ: ಕನ್ನಾಳ ಗ್ರಾಪಂ ವ್ಯಾಪ್ತಿಯಲ್ಲಿ ಕರೊನಾ ರೋಗದ ಭಯವಿಲ್ಲದೇ ಎಲ್ಲೆಂದರಲ್ಲಿ ನಡೆಯುವ ಕಳ್ಳಬಟ್ಟಿ ದಂಧೆಗೆ ಕಡಿವಾಣ ಹಾಕುವಂತೆ ಗ್ರಾಪಂ ಅಧ್ಯಕ್ಷ ತಿಪ್ಪಣ್ಣ ರಾಠೋಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮೊರೆ ಹೋಗಿದ್ದಾರೆ.

ಲಾಕ್‌ಡೌನ್ ಜಾರಿ ಹಿನ್ನೆಲೆಯಲ್ಲಿ ಬೇರೆ ರಾಜ್ಯ ಹಾಗೂ ನಗರದ ಪ್ರದೇಶಗಳಲ್ಲಿ ವಾಸಿಸುವ ಜನರು ತಮ್ಮ-ತಮ್ಮ ಗ್ರಾಮಗಳಿಗೆ ಮರಳಿ ಬಂದಿದ್ದಾರೆ. ಇದರ ಪರಿಣಾಮವಾಗಿ ಹಳ್ಳಿ ಹಾಗೂ ತಾಂಡಾಗಳಲ್ಲಿ ಸಾಮಾನ್ಯವಾಗಿ ಜನರು ಹೆಚ್ಚಾಗಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಹಳ್ಳಿಗಳಲ್ಲಿ ಕಳ್ಳಬಟ್ಟಿ ಮಾಡಿ ಮಾರಾಟ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗೆ ಪತ್ರ
ಕನ್ನಾಳ ಗ್ರಾಪಂ ವ್ಯಾಪ್ತಿಯ ಜಕ್ಕೇರಮಡು ತಾಂಡಾದಲ್ಲಿ ಕಳ್ಳಬಟ್ಟಿ ಸರಾಯಿ ದಂಧೆ ಯಥೆಚ್ಛವಾಗಿ ನಡೆಯುತ್ತಿದೆ ಎಂದು ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕಳ್ಳಬಟ್ಟಿ ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಕನ್ನಾಳ ಗ್ರಾಪಂ ವ್ಯಾಪ್ತಿಯಲ್ಲಿ ಕಳ್ಳಬಟ್ಟಿ ಸಾರಾಯಿ ದಂಧೆ ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ.| ಬಲರಾಮ ಕಟ್ಟಿಮನಿ ತಾಲೂಕು ದಂಡಾಧಿಕಾರಿ ಮಸ್ಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net