ಕಲ್ಲಡ್ಕ ವಲಯಮಟ್ಟದ ಕ್ರೀಡಾಕೂಟ

sanmana
Published on

ಬಂಟ್ವಾಳ: ಕಲ್ಲಡ್ಕ ವಲಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕ್ರೀಡಾಕೂಟ ಪೆರ್ನೆಯ ಶ್ರೀ ರಾಮಚಂದ್ರ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಜಯಂತ ನಡುಬೈಲು ಕ್ರೀಡಾಕೂಟ ಉದ್ಘಾಟಿಸಿದರು. ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಂಚಾಲಕ ಹರೀಶ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಪ್ರಸಾದ್ ರೈ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮ್ಯಾಕ್ಸಿಮ್ ಲೋಬೋ ಉಪಸ್ಥಿತರಿದ್ದರು. ವಿದ್ಯಾಲಯದ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರಿಗೆ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಶ್ರೀ ರಾಮಚಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶೇಖರ್ ರೈ ಕೆ. ಅಧ್ಯಕ್ಷತೆ ವಹಿಸಿದರು. ಉದ್ಯಮಿ ಅಬ್ದುಲ್ ರಹಿಮಾನ್, ರೋಟರಿ ಕ್ಲಬ್ ವಲಯ ಸೇನಾನಿ ಪುಷ್ಪರಾಜ್ ಹೆಗ್ಡೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ತಿಮ್ಮಪ್ಪ ಕೆ. ಹಾಜರಿದ್ದರು. ಪ್ರೌಢಶಾಲೆಯ ಮುಖ್ಯಶಿಕ್ಷಕ ಸತ್ಯನಾರಾಯಣ ರೈ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net