ಪ್ರತಿಭೆ ಹೊರತರಲು ಕಲೋತ್ಸವ ಕಾರ್ಯಕ್ರಮ ಪೂರಕ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಅಭಿಪ್ರಾಯ

27M.D.R.5
Published on

ಮದ್ದೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಕಲೋತ್ಸವ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ಮೂಡಲದೊಡ್ಡಿ ಗ್ರಾಮದ ಶ್ರೀವೆಂಕಟೇಶ್ವರ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ಕೊಪ್ಪ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಒಂದು ರೀತಿಯ ವಿಭಿನ್ನ ಪ್ರತಿಭೆಗಳು ಇರುತ್ತವೆ. ಇಂತಹ ಪ್ರತಿಭೆಗಳನ್ನು ಶಿಕ್ಷಕರು ಹಾಗೂ ಪಾಲಕರು ಗುರುತಿಸಿ ಸೂಕ್ತ ವೇದಿಕೆ ನಿರ್ಮಿಸಿಕೊಟ್ಟರೆ ಅವರು ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು ತಿಳಿಸಿದರು.

ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ ಕೀಲಾರ ಮಾತನಾಡಿ, ತಾಲೂಕಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಿನ ಮಟ್ಟದಲ್ಲಿ ನಡೆಯಲಿ. ಅದಕ್ಕೆ ಸಂಪೂರ್ಣ ಸಹಕಾರವನ್ನು ಸಂಸ್ಥೆಯ ವತಿಯಿಂದ ನೀಡಲಾಗುವುದು ಎಂದು ಭರವಸೆ ನೀಡಿದರು.

ಇಸಿಒ ನಟೇಶ್, ಮುಖ್ಯ ಶಿಕ್ಷಕಿ ರೇಖಾ, ಶಿಕ್ಷಕರಾದ ಬಾಪುಚೇತನ್, ಶಿವರಾಮು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net