ಹೋರಾಟಗಾರರ ಬಲಿದಾನದ ಫಲವೇ ಸ್ವಾತಂತ್ರ್ಯ

17kmr1
ಕಮಲನಗರ ತಹಸಿಲ್ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸುಶೀಲಾಬಾಯಿ ಸಜ್ಜನ್, ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ತಾಪಂ ಇಒ ಮಾಣಿಕರಾವ ಪಾಟೀಲ್, ಎಡಿ ಹಣಮಂತರಾಯ ಕೌಟಗೆ, ಗ್ರೇಡ್-೨ ತಹಸೀಲ್ದಾರ್ ರಮೇಶ ಪೆದ್ದೆ, ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಎನ್. ಶಿವಣಕರ
Published on

ಕಮಲನಗರ: ತ್ಯಾಗ, ಬಲಿದಾನದ ಫಲವಾಗಿ ದೊರೆತ ಸ್ವಾತಂತ್ರ್ಯವನ್ನು ದುರುಪಯೋಗ ಮಾಡಿಕೊಳ್ಳದೆ ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು. ರಜಾಕರರ ದೌರ್ಜನ್ಯದ ವಿರುದ್ಧ ಹೋರಾಡಿದ ಮಹಾತ್ಮರ ತತ್ವಗಳು ಯುವ ಜನಾಂಗಕ್ಕೆ ಪ್ರೇರಣೆಯಾಗಿವೆ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹಣಮಂತರಾಯ ಕೌಟಗೆ ಹೇಳಿದರು.

ತಹಸಿಲ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈದರಾಬಾದ್ ನಿಜಾಮ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶ ಸ್ವಾತಂತ್ರ್ಯದ ೧೩ ತಿಂಗಳ ನಂತರ ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನಗೊಂಡಿತು. ಅಂದಿನ ಗೃಹಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮುತ್ಸದ್ಧಿ ನಾಯಕತ್ವದ ಪ್ರತಿಫಲ ಇದಾಗಿದೆ ಎಂದರು.

ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಧ್ವಜಾರೋಹಣ ನೆರವೇರಿಸಿದರು. ತಾಪಂ ಇಒ ಮಾಣಿಕರಾವ ಪಾಟೀಲ್, ಗ್ರೇಡ್-೨ ತಹಸೀಲ್ದಾರ್ ರಮೇಶ ಪೆದ್ದೆ, ಗ್ರಾಪಂ ಅಧ್ಯಕ್ಷೆ ಸುಶೀಲಾಬಾಯಿ ಸಜ್ಜನ್, ನಿವೃತ್ತ ಪ್ರಾಚಾರ್ಯ ಪ್ರೊ.ಎಸ್.ಎನ್. ಶಿವಣಕರ, ಸುಭಾಷ ಮಿರ್ಚೆ, ಬಸವರಾಜ ಪಾಟೀಲ್, ಶೇರು ಬಾಗವಾನ್, ವಿಠ್ಠಲರಾವ ಪಾಟೀಲ್, ಗೋವಿಂದರಾವ ತಾಂದಳೆ ಇತರರಿದ್ದರು. ಕಲ್ಯಾಣರಾವ ಕುಲಕರ್ಣಿ ಸ್ವಾಗತಿಸಿದರು. ಉಮಾಕಾಂತ ಮಹಾಜನ್ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net