ಕಮಲ್ ಹಾಸನ್ ಕನ್ನಡಿಗರ ಕ್ಷಮೆಯಾಚಿಸಲಿ

New Muttanna new
Published on

ಹುಬ್ಬಳ್ಳಿ : ಕನ್ನಡ ಭಾಷೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಹುಭಾಷಾ ನಟ ಕಮಲ್​ಹಾಸನ್ ತಕ್ಷಣ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಅಖಿಲ ಕರ್ನಾಟಕ ಡಾ. ರಾಜಕುಮಾರ ಅಭಿಮಾನಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಶಿವಾನಂದ ಮುತ್ತಣ್ಣವರ ಆಗ್ರಹಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಕನ್ನಡ ಭಾಷೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಮಲ್​ಹಾಸನ್ ವರ್ತನೆ ಖಂಡನೀಯ. ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ಹೇಳಿಕೆ ನೀಡಲು ಅವರೇನೂ ಭಾಷಾತಜ್ಞರಲ್ಲ ಎಂದು ಹೇಳಿದರು.

ಕಮಲ್​ಹಾಸನ್ ಅವರು ಕನ್ನಡಿಗರ ಕ್ಷಮೆ ಕೇಳುವವರೆಗೂ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಕನ್ನಡ ಭಾಷೆ ವಿರೋಧಿಸುವವರ ಚಲನಚಿತ್ರಗಳನ್ನು ಪ್ರದರ್ಶಿಸಬಾರದು ಎಂದು ಒತ್ತಾಯಿಸಿದರು.

ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಚಿಂತನಾ ಸಭೆಗಳನ್ನು ಕನ್ನಡಪರ ಸಂಘಟನೆಗಳು ಆಯೋಜಿಸಬೇಕು. ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಕನ್ನಡ ಅಭಿಮಾನಿಗಳು ಭಾಷೆಯ ವಿಷಯದಲ್ಲಿ ಮೃದು ಧೋರಣೆ ತಾಳಬಾರದು ಎಂದರು.

ದ್ಯಾಮಣ್ಣ ಡೊಂಗಿ, ಜಗದೀಶ ರಿತ್ತಿ, ವೆಂಕಟ ಶೆಟ್ಟಿ, ಆನಂದ ಡೊಂಗಿ, ಪೀಟರ್, ಹಸನಸಾಬ್ ಬಡೇಖಾನ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net