ಕಮಲ ಹಂಪನಾ ಅವರಿಗೆ ಗಣ್ಯರಿಂದ ನುಡಿನಮನ

Kamala Hampana
Published on

ಬಿ.ಎಂ.ಶ್ರೀ ಪ್ರತಿಷ್ಠಾನ, ಕನ್ನಡ ಸಂರ್ಷ ಸಮಿತಿ ಹಾಗೂ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಶುಕ್ರವಾರ ಎನ್.ಆರ್.ಕಾಲೋನಿಯ ಬಿ.ಎಂ.ಶ್ರೀ ಕಲಾಭವನದಲ್ಲಿ ನಾಡೋಜ ಕಮಲ ಹಂಪನಾ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ಕನ್ನಡ ಹೋರಾಟಗಾರ ಎಚ್​.ರಾಮಣ್ಣ ಕೋಡಿಹೊಸಹಳ್ಳಿ, ಬಿ.ಎಂ.ಶ್ರೀ ಪ್ರತಿಷ್ಠಾನದ ಆಧ್ಯಕ್ಷ ಡಾ.ಬೈರಮಂಗಲ ರಾಮೇಗೌಡ, ಕನ್ನಡ ಜನಶಕ್ತಿ ಕೇಂದ್ರ ಅಧ್ಯಕ್ಷ ಸಿ.ಕೆ.ರಾಮೇಗೌಡ ಮತ್ತಿತರರು ನುಡಿನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net