ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್​ ಪಂತ್​ ನೇಮಕ

Kamal Pant
Published on

ಬೆಂಗಳೂರು: ಇಷ್ಟು ದಿನದವರೆಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿ ಸೇವೆ ಸಲ್ಲಿಸಿದ ಐಪಿಎಸ್​ ಅಧಿಕಾರಿ ಭಾಸ್ಕರ್​ ರಾವ್​ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ದಕ್ಷ ಅಧಿಕಾರಿ ಕಮಲ್ ಪಂತ್ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಒಂದು ವರ್ಷ ಅವಧಿ ಮುಗಿಸಿದ ಹಿನ್ನಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. 1990ನೇ ಬ್ಯಾಚ್ ಐಪಿಎಸ್​ ಅಧಿಕಾರಿಯಾಗಿರುವ ಉತ್ತರಾಂಚಲ ಮೂಲದ ಕಮಲ್​ ಪಂತ್​, ನೂತನ ನಗರ ಆಯಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಮಲ್​ ಪಂತ್​​ ಅವರು ಸದ್ಯ ಗುಪ್ತಚರ ಇಲಾಖೆಯ ಎಡಿಜಿಪಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿ ಕೆಲಸ ಮಾಡಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಹಲವು ವಿಭಾಗದಲ್ಲಿ ಡಿಸಿಪಿಯಾಗಿ ಕೆಲಸ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಎಸ್​ಪಿ ಆಗಿ ಕೆಲಸ ಮಾಡಿದ ಅನುಭವ ಇದೆ.

ಇನ್ನು ಭಾಸ್ಕರ್​ ರಾವ್​ ಅವರನ್ನು ಎಡಿಜಿಪಿ ಆಂತರಿಕ ಭದ್ರತಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net