ಕಮಲ ಉತ್ತಯ್ಯ ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷೆ

9adarshkdga5
Published on

ಮಡಿಕೇರಿ: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಚಳಿಯಂಡ ಕಮಲ ಉತ್ತಯ್ಯ ಚುನಾಯಿತರಾಗಿದ್ದಾರೆ.


ಒಟ್ಟು ೧೬ ಸದಸ್ಯರ ಬಲ ಹೊಂದಿರುವ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಸಂಖ್ಯೆ ಒಟ್ಟು ೧೩ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಂಖ್ಯೆ ೩ ಇತ್ತು. ಆದರೆ, ಬುಧವಾರ ಚುನಾವಣೆ ನಡೆದ ಸಂದರ್ಭ ಕಾಂಗ್ರೆಸ್ ಅಧ್ಯಕ್ಷರ ಅಭ್ಯರ್ಥಿಗೆ ೯ ಮತಗಳು ದೊರಕಿದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಬಾಡನ ಲಿಕಿತಾ ೭ ಮತಗಳು ದೊರಕಿದೆ. ಉಪಾಧ್ಯಕ್ಷರಾಗಿ ದೇವಯ್ಯರವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ನಂದಕುಮಾರ್, ಉಡೋತ್ ಗೋಪಾಲ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net