ಕಮಲಾಪುರ; ನೇಮಕಾತಿಯಲ್ಲಿನ ಅವೃಜ್ಞಾನಿಕ ಅಂಶ ಹಿಂಪಡೆಯಿರಿ

PH 01
Published on

ಕಮಲಾಪುರ: ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯಲ್ಲಿ ಅಳವಡಿಸಿರುವ ಅವೈಜ್ಞಾನಿಕ ಅಂಶಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿAದ ತಹಸಿಲ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸರಕಾರವು ಶಿಕ್ಷಕರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಲಾಗಿದರುವ ಅವೈಗ್ನಾನಿಕ ಅಂಶಗಳಿಂದ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪದವೀಧರ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಅರ್ಹತೆ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುz್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ತಹಸೀಲ್ದಾರ್ ಮಹಮ್ಮದ್ ಮೊಹಸಿನ್, ಬಿಇಒ ಸೋಮಶೇಖರ ಹಂಚಿನಾಳ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಸಂಘದ ತಾಲೂಕು ಅಧ್ಯಕ್ಷ ಪರಮೇಶ್ವರ ಓಕಳಿ, ಪ್ರಮುಖರಾದ ಮಹಿಬೂಬ್ ಮಡಕಿ, ಶಿವಲಿಂಗಪ್ಪ ಬಿರಾದಾರ, ಮಲ್ಲಿಕಾರ್ಜುನ ದಸ್ತಾಪುರ, ಮಧು, ಮಾಲತಿ ದೊಶೆಟ್ಟಿ, ದೌಲತ್‌ಮಿಯಾ, ತಿಪ್ಪಣ್ಣ ಕಚೇರಿ, ಶಶಿಕಲಾ ಕಲ್ಯಾಣ, ಭೀಮಾಶಂಕರ ರಾಜೇಶ್ವರ, ಜಯಶ್ರೀ ಕೋಟನೂರ, ಕಸ್ತೂರಿ ರಾಜೇಶ್ವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net