

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಟಾರ್ಗೆಟ್ ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ದೇವಾಲಯವೇ ಆಗಿತ್ತು ಎನ್ನುವುದು ಎನ್‌ಐಎ ತನಿಖೆಯಿಂದ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ಪ್ರಸಿದ್ಧ ದೇವಾಲಯಗಳು ಸಹಿತ ರಾಜ್ಯದ ಎಲ್ಲ ಧಾರ್ಮಿಕ ಕ್ಷೇತ್ರಗಳ ಭದ್ರತೆ ಹೆಚ್ಚಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ಉಗ್ರ ಕೃತ್ಯಕ್ಕೆ ಸಂಬಂಧಿಸಿದ ಗೋಡೆ ಬರಹಗಳು ಸಹಿತ ರಾಜ್ಯದ ಇತರ ಭಾಗಗಳಲ್ಲಿ
ಭಯೋತ್ಪಾದಕ ಕೃತ್ಯ ನಡೆದಿರುವುದು ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿದೆ. ಇಂತಹ ಆರೋಪಿಗಳ ಪರ ವಹಿಸಿಕೊಂಡು ಮಾತನಾಡುವ ಕಾಂಗ್ರೆಸ್ ನಾಯಕರು ಈಗ ಏನು ಹೇಳುತ್ತಾರೆ? ಇನ್ನಾದರೂ ಉಗ್ರ ಕೃತ್ಯಗಳಿಗೆ ಸಂಬಂಧಿಸಿ ಹೇಳಿಕೆ ಕೊಡುವಾಗ ಓಲೈಕೆ ರಾಜಕಾರಣ ಮಾಡುವುದನ್ನು ಬಿಟ್ಟು ವಿಷಯದ ಗಂಭೀರತೆ ಅರಿತು ಮಾತನಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
...........................