ಕನ್ನಡಿಗರ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಚಳವಳಿ: ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಹೇಳಿಕೆ

1 (13)
Published on

ಮಂಡ್ಯ: ಸಮಗ್ರ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಹೇಳಿದರು.

ಕನ್ನಡಿಗರ ಉದ್ಯೋಗಕ್ಕಾಗಿ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ, ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು. ರೈತರು ಬೆಳೆದ ಬೆಳೆಗಳಿಗಾಗಿ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಹಾಗೂ ರೈತರ ಸಾಲ ಮನ್ನಾ ಮಾಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದ ನಂದಿನಿಯೊಂದಿಗೆ ಗುಜರಾತ್‌ನ ಅಮೂಲ್ ವೀಲಿನ ಪ್ರಸ್ತಾಪವನ್ನು ಕೈ ಬಿಡಬೇಕು. ಎಲ್ಲ ಜಿಲ್ಲೆಗಳಲ್ಲಿ ನಂದಿನಿ ಉತ್ಪನ್ನಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವಂತೆ ಕೆಎಂಎ್ ಯೋಜನೆ ರೂಪಿಸಬೇಕೆಂದು ಆಗ್ರಹಿಸಿದರು.

ಕದಂಬ ಸೈನ್ಯದ ಮುಖಂಡರಾದ ಶಿವಕುಮಾರ್ ಆರಾಧ್ಯ, ರಾಮಣ್ಣ, ಉಮ್ಮಡಹಳ್ಳಿ ನಾಗೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net