ಪರಂಪರೆಯಲ್ಲಿ ಸಾಗಿ ಬಂದ ಕ್ರೀಡೆ ಕಂಬಳ

chalavadi
Published on

ಪಡುಬಿದ್ರಿ: ಪರಂಪರೆಯಲ್ಲಿ ಸಾಗಿ ಬಂದ ಕ್ರೀಡೆ ಕಂಬಳ. ಬೇರೆ ಬೇರೆ ಪ್ರಾಂತ್ಯಗಳಲ್ಲಿ ವಿಭಿನ್ನ ಚಟುವಟಿಕೆ ನಡೆಯುತ್ತಿರುತ್ತವೆ. ಕಂಬಳ ಅಂದರೆ ಬೆಂಗಳೂರಲ್ಲಿ ನಡೆಯುವುದಿಲ್ಲ. ಅಲ್ಲಿ ಸಂಬಳ ಇದ್ದರೆ ಮಾತ್ರ ಎಲ್ಲ ನಡೆಯುವುದ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಅಡ್ವೆ ನಂದಿಕೂರು ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಶನಿವಾರ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವದಲ್ಲಿ ಮಾತನಾಡಿದರು.

ಎಂಆರ್‌ಜಿ ಸಮೂಹ ಉದ್ಯಮ ಸಂಸ್ಥೆ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಮಾತನಾಡಿದರು.

ಛಲವಾದಿ ನಾರಾಯಣ ಸ್ವಾಮಿ ಮತ್ತು ಸುನಂದಾ ನಾರಾಯಣ ಸ್ವಾಮಿ ದಂಪತಿಯನ್ನು ಸನ್ಮಾನಿಸಲಾಯಿತು. ಕಂಬಳ ಸಮಿತಿ ಅಧ್ಯಕ್ಷರಾಗಿದ್ದ ಅಡ್ವೆ ಮೂಡ್ರಗುತ್ತು ಚಿತ್ತರಂಜನ್ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಪಂ ಅಧ್ಯಕ್ಷ ದಿನಕರ್ ಬಾಬು, ಪ್ರಭಾಕರ್ ಶೆಟ್ಟಿ, ಅದಾನಿ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ, ಭಾಸ್ಕರ ಸುಬ್ಬಯ್ಯ ಕೋಟ್ಯಾನ್, ಮಲ್ಲಿಕಾ ಯಶವಂತ ಶೆಟ್ಟಿ, ಎರ್ಮಾಳ್ ರೋಹಿತ್ ಹೆಗ್ಡೆ, ಶಾಸಕ ಉಮಾನಾಥ ಕೋಟ್ಯಾನ್, ಮಿಥುನ್ ರೈ, ಪ್ರಶಾಂತ್ ಕಾಜವ, ಮಾಜಿ ಸಚಿವ ರಮಾನಾಥ ರೈ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪುಣೆ, ರಘು ಎಲ್.ಶೆಟ್ಟಿ, ಬಾರ್ಕೂರು ಶಾಂತಾರಾಮ ಶೆಟ್ಟಿ, ಸಂಜೀವ ಶೆಟ್ಟಿ, ಉದ್ಯಮಿಗಳಾದ ಎಸ್.ಕೆ.ಸಾಲ್ಯಾನ್, ಮಿಥುನ್ ಆರ್.ಹೆಗ್ಡೆ, ನವೀನ್‌ಚಂದ್ರ ಜೆ.ಶೆಟ್ಟಿ, ಪಲಿಮಾರು ಗ್ರಾಪಂ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ವರ ಪೈ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಅಧ್ಯಕ್ಷ ಅಡ್ವೆ ಮೂಡ್ರಗುತ್ತು ಸುರೇಶ್ ಶೆಟ್ಟಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವೀನ್‌ಚಂದ್ರ ಸುವರ್ಣ ಅಡ್ವೆ, ಸತೀಶ್ ಶೆಟ್ಟಿ ಬೆಜ್ಜಬೆಟ್ಟು, ಎಡ್ತೂರು ರಾಜೀವ ಶೆಟ್ಟಿ ಮತ್ತಿತರರು ಇದ್ದರು. ಸಾಯಿನಾಥ್ ಶೆಟ್ಟಿ ಮುಂಡ್ಕೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net