ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಿ

221122 Kampli Electoral Roll Revision Meeting
ಕಂಪ್ಲಿ ತಹಸಿಲ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ತಹಸೀಲ್ದಾರ್ ಗೌಸಿಯಾಬೇಗಂ ಮಾತನಾಡಿದರು.
Published on

ಕಂಪ್ಲಿ: ಇಲ್ಲಿನ ತಹಸಿಲ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮತದಾರರ ಪಟ್ಟಿ ಪರಿಷ್ಕರಣೆ ನಿಮಿತ್ತ ಶಾಲಾ ಕಾಲೇಜುಗಳ ಪ್ರಾಚಾರ್ಯರು, ಮುಖ್ಯಶಿಕ್ಷಕರು, ನೋಡಲ್ ಅಧಿಕಾರಿಗಳು ಹಾಗೂ ಬಿಎಲ್‌ಒ ಮೇಲ್ವಿಚಾರಕರ ಸಭೆ ನಡೆಯಿತು.

ತಹಸೀಲ್ದಾರ್ ಗೌಸಿಯಾಬೇಗಂ ಮಾತನಾಡಿ, 18, 19 ವಯೋಮಿತಿಯ ಯುವ ಮತದಾರರ ಜತೆಗೆ ಅಂಗವಿಕಲರು, ತೃತೀಯ ಲಿಂಗಿಗಳು, ದೇವದಾಸಿಯರನ್ನು ಮತದಾರ ಪಟ್ಟಿಗೆ ಸೇರಿಸಲು ಕ್ರಮವಹಿಸಬೇಕು. ಬಿಎಲ್‌ಒಗಳು ಮನೆಮನೆ ಸಮೀಕ್ಷೆ ಕೈಗೊಂಡಿದ್ದು, ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯುವ ಮತದಾರರನ್ನು ಪಟ್ಟಿಗೆ ಸೇರಿಸುವ ಕೆಲಸವನ್ನು ಕಾಲೇಜುಗಳ ಮುಖ್ಯಸ್ಥರು ಮಾಡಬೇಕು ಎಂದು ತಿಳಿಸಿದರು. ನೋಡಲ್ ಅಧಿಕಾರಿಗಳಾದ ಶ್ರೀಧರ್, ಮಹ್ಮದ್ ಶಫಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net