ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ

280922 Kampli BJP Mahila Morcha
ಕಂಪ್ಲಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.
Published on

ಕಂಪ್ಲಿ: ಪ್ರಧಾನಿ ನರೇಂದ್ರಮೋದಿಯವರ ಜನ್ಮದಿನಾಚರಣೆ ನಿಮಿತ್ತ ಸೇವಾ ಪಾಕ್ಷಿಕದಡಿ ಸಕ್ಕರೆ ಕಾರ್ಖಾನೆಯ ಮುಕ್ತಿನಾಥೇಶ್ವರ ದೇವಸ್ಥಾನ ಆವರಣದಲ್ಲಿ, ಬಿಜೆಪಿ ಮಹಿಳಾ ಮೋರ್ಚಾದಿಂದ ಆದರ್ಶ ಅಂಗನವಾಡಿ ಅಭಿಯಾನ ಕಾರ್ಯಕ್ರಮ ಮಂಗಳವಾರ ಜರುಗಿತು.

ಬಿಜೆಪಿ ಮಹಿಳಾ ಮೋರ್ಚಾದ ತಾಲೂಕು ಅಧ್ಯಕ್ಷೆ ಟಿ.ರಬಿಯಾನಿಸಾರ್ ಅಧ್ಯಕ್ಷತೆವಹಿಸಿ ಮಾತನಾಡಿ, ಮಕ್ಕಳ ಆರಂಭಿಕ ಶಿಕ್ಷಣ, ಆರೋಗ್ಯ ಮತ್ತು ಹವ್ಯಾಸಗಳ ಮೇಲೆ ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸುವುದರಿಂದ ಭವಿಷ್ಯದಲ್ಲಿ ಜವಾಬ್ದಾರಿಯುತ ಜನಾಂಗ ರೂಪಿಸಲು ಸಾಧ್ಯವಿದೆ. ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿಯೂ ಮುಖ್ಯಪಾತ್ರವಹಿಸುತ್ತಾರೆ ಎಂದರು.

ಬಿಜೆಪಿ ಮಹಿಳಾ ಜಿಲ್ಲಾ ಉಪಾಧ್ಯಕ್ಷೆ ಡಾ.ಅರುಣಾ ಸಮಾರಂಭಕ್ಕೆ ಚಾಲನೆ ನೀಡಿ, ಮಹಿಳೆಯರು ತಮ್ಮಲ್ಲಿನ ಸುಪ್ತ ಪ್ರತಿಭೆ ಮತ್ತು ಶಕ್ತಿಯನ್ನು ಅರಿತುಕೊಳ್ಳಬೇಕು. ಉತ್ತಮ ಕೆಲಸಗಳನ್ನು ನಿರ್ವಹಿಸಲು ಹಿಂಜರಿಕೆ ಸಲ್ಲದು ಎಂದರು. ಬನ್ನೀವೃಕ್ಷಕ್ಕೆ ಪೂಜೆ ಸಲ್ಲಿಸಿದ ನಂತರ ಕಾರ್ಯಕ್ರಮ ಆರಂಭಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವೀರೇಶ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕುಮಾರಿ ಸುಗುಣ, ರಾಜ್ಯ ಉಪಾಧ್ಯಕ್ಷೆ ಶಿವಕೃಷ್ಣ, ಪ್ರಮುಖರಾದ ಪುಷ್ಪಾ, ಲತಾ, ಉಮಾ ಮಹೇಶ್ವರಿ, ಸುನಿತಾ, ಪದ್ದಮ್ಮ, ಉಷಾ, ಪಾರ್ವತಮ್ಮ, ಪ್ರಮುಖರಾದ ಪಿ.ಬ್ರಹ್ಮಯ್ಯ, ಜಿ.ಸುಧಾಕರ, ಬಿ.ಸಿದ್ದಪ್ಪ, ಜಿ.ಲಿಂಗನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net