ಕಂಪ್ಲಿಯಲ್ಲಿ ಮದುವೆ ಮಂಟಪಕ್ಕೆ ಹೋಗಿ ಬಾಲ್ಯವಿವಾಹ ತಡೆದ ಅಧಿಕಾರಿಗಳು

Child Marriage
Published on

ಕಂಪ್ಲಿ: ಪಟ್ಟಣದಲ್ಲಿ ಭಾನುವಾರ ನಡೆಯಬೇಕಿದ್ದ ಬಾಲ್ಯವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಇಲ್ಲಿನ ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ 17ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿ ಮದುವೆಗೆ ಸಿದ್ಧತೆ ನಡೆದಿತ್ತು.

ಈ ಕುರಿತು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಬಂದ ಹಿನ್ನೆಲೆಯಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕಿ ನೇತ್ರಾ, ಎಎಸ್‌ಐ ಕೆ.ಮಾರೇಶ್, ಮಹಿಳಾ ಪೇದೆ ಸುಶೀಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೇಣುಕಾ ದಾಳಿ ನಡೆಸಿ ಮದುವೆ ತಡೆದರು. ಅಪ್ರಾಪ್ತ ಬಾಲಕಿಯನ್ನು ಬಳ್ಳಾರಿ ಮಕ್ಕಳ ಕಲ್ಯಾಣ ಸಮಿತಿಯ ಬಾಲಕಿಯರ ಬಾಲಮಂದಿರಕ್ಕೆ ಒಪ್ಪಿಸಲಾಗಿದೆ ಎಂದು ಸಂಯೋಜಕಿ ನೇತ್ರಾ ತಿಳಿಸಿದ್ದಾರೆ.ಬಾಲ ಮಂದಿರದ ಪಾರ್ವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net