ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಣೆ ಸಂಪನ್ನ

28 KAMPLI 01
Published on

,ಕಂಪ್ಲಿ: ತಿಗಳ ಸಮುದಾಯದ ಮೂಲಪುರುಷ ಅಗ್ನಿ ಬನ್ನಿರಾಯಸ್ವಾಮಿ ತತ್ವಾದರ್ಶವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಗೌಸಿಯಾಬೇಗಂ ಹೇಳಿದರು.

ಇಲ್ಲಿನ ತಹಸಿಲ್ ಕಚೇರಿ ಸಭಾಂಗಣದಲ್ಲಿ ಅಗ್ನಿ ಬನ್ನಿರಾಯಸ್ವಾಮಿ ಜಯಂತ್ಯುತ್ಸವದಲ್ಲಿ ಮಾತನಾಡಿದರು. ದಾರ್ಶನಿಕರ ಜೀವನ ಸಂದೇಶಗಳು ಸಮ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸರ್ವಧರ್ಮಿಯರೊಡನೆ ಪರಧರ್ಮಸಹಿಷ್ಣುತೆಯಿಂದ ಜೀವಿಸುವಂತೆ ಪ್ರೇರೇಪಿಸುತ್ತದೆ ಎಂದು ಹೇಳಿದರು.

ಉಪ ತಹಸೀಲ್ದಾರ್ ಬಿ.ರವೀಂದ್ರಕುಮಾರ್, ಆಹಾರ ನಿರೀಕ್ಷಕ ವಿರೂಪಾಕ್ಷಗೌಡ, ಆರ್‌ಐ ಎ.ಗಣೇಶ್, ಶಿರಸ್ತೇದಾರರಾದ ಜಿ.ಪಂಪಾಪತಿ, ಎಸ್.ಡಿ.ರಮೇಶ್, ವಿಎಗಳಾದ ಟಿ.ಗಿರೀಶಕುಮಾರ್, ವಿಜಯಕುಮಾರ್, ಶಿವರುದ್ರಯ್ಯ, ವನಿತಾ, ರಾಧಾ, ರೂಪಿಣಿ, ಸುರೇಶ್, ಹೊನ್ನಪ್ಪ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net