ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಗಮನ ಸೆಳೆಯುವ ಕಸರತ್ತು

28102020 Kampli Teachurs election
Published on

ಕಂಪ್ಲಿ: ಪಟ್ಟಣದಲ್ಲಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ಜರುಗಿತು. ಶಿಕ್ಷಕ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಕರೊನಾ ಮುಂಜಾಗ್ರತಾ ಕ್ರಮವಾಗಿ ಮತಗಟ್ಟೆಗೆ ತೆರಳುವ ಮುನ್ನವೇ ಮತದಾರರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಯಾನಿಟೈಸರ್ ಹಾಕಿ, ಥರ್ಮಲ್ ರೆಸ್ಪಾನ್ಸರ್ ಗನ್ ಹಾಗೂ ಪಲ್ಸ್ ಆಕ್ಸಿಮೀಟರ್‌ನಿಂದ ಪರೀಕ್ಷಿಸಲಾಯಿತು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳ ಮುಖಂಡರು ಮತಗಟ್ಟೆಯಿಂದ ದೂರದಲ್ಲಿ ಬೀಡು ಬಿಟ್ಟು ಅಂತಿಮವಾಗಿ ಮತದಾರರ ಗಮನ ಸೆಳೆಯುವ ಕಸರತ್ತು ನಡೆಸಿದ್ದು ಕಂಡು ಬಂದಿತು.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಸಿದ್ದರೂ, ಬಹುತೇಕರ ಹೆಸರು ಪಟ್ಟಿಗೆ ಸೇರ್ಪಡೆಗೊಂಡಿಲ್ಲ ಎಂದು ಹೆಸರೇಳಲಿಚ್ಚಿಸದ ಶಿಕ್ಷಕರು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net