ತೃತಿಯಲಿಂಗಿಗಳಿಗೆ ನಿವೇಶನ ಕೊಡಿ

160522 Kampli Other Genders Appeal
ಕಂಪ್ಲಿ ತಹಸೀಲ್ದಾರ್ ಗೌಸಿಯಾಬೇಗಂಗೆ ಸೋಮವಾರ ಮನವಿ ಸಲ್ಲಿಸಿದ ಕಿಸಾನ್ ಜಾಗೃತಿ ವಿಕಾಸ್ ಸಂಘದ ಜಿಲ್ಲಾಧ್ಯಕ್ಷ ಕೆ.ಕೃಷ್ಣ, ತೃತೀಯಲಿಂಗಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿದರು.
Published on

ಕಂಪ್ಲಿ: ಪಟ್ಟಣದಲ್ಲಿ 25ಕ್ಕೂ ಹೆಚ್ಚು ತೃತೀಯಲಿಂಗಿಗಳು ಇದ್ದು, ಇವರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವಲ್ಲಿ ತಾಲೂಕು ಆಡಳಿತ ಮುತುವರ್ಜಿ ವಹಿಸಬೇಕು ಎಂದು ಕಿಸಾನ್ ಜಾಗೃತಿ ವಿಕಾಸ್ ಸಂಘದ ಜಿಲ್ಲಾಧ್ಯಕ್ಷ ಕೆ.ಕೃಷ್ಣ ಒತ್ತಾಯಿಸಿದ್ದಾರೆ.

ಮಂಗಳಮುಖಿಯರೊಂದಿಗೆ ತಹಸಿಲ್ ಕಚೇರಿಗೆ ಆಗಮಿಸಿ, ತಹಸೀಲ್ದಾರ್ ಗೌಸಿಯಾಬೇಗಂಗೆ ಸೋಮವಾರ ಮನವಿ ಸಲ್ಲಿಸಿದರು. ಪಟ್ಟಣದ ಹೌಸಿಂಗ್ ಬೋರ್ಡ್ ಕೆಳಗಡೆ ಭಾಗದಲ್ಲಿ ಸರ್ಕಾರಿ ಜಾಗವಿದೆ. ಇದರಲ್ಲಿ ಕೆಲ ತೃತೀಯಲಿಂಗಿಗಳು ವಾಸಿಸಲು ಸ್ಥಳ ಸ್ವಚ್ಛ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಅವರಿಗೆ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಈ ದೌರ್ಜನ್ಯ ತಡೆಯಬೇಕು. ಇದೇ ಸ್ಥಳದಲ್ಲೇ ಅವರಿಗೆ ವಾಸಕ್ಕೆ ಅವಕಾಶ ಮಾಡಿಕೊಡಬೇಕು. ಅವರಿಗೆ ನಿತ್ಯ ಪೂಜೆ ಸಲ್ಲಿಸಲು ಹುಲಿಗೆಮ್ಮ ದೇವಸ್ಥಾನಕ್ಕೂ ಸ್ಥಳ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net